ಜಿಲ್ಲೆ

ಟ್ಯಾಕ್ಸಿ, ಆಟೋರಿಕ್ಷಾ ಚಾಲಕರ ಮಕ್ಕಳಿಗೆ ವಿದ್ಯಾನಿಧಿ

ತುಮಕೂರು: ರಾಜ್ಯ ಸರ್ಕಾರ ಹಳದಿ ಬೋರ್ಡ್ ಟ್ಯಾಕ್ಸಿ ಚಾಲಕರ ಮತ್ತು ಆಟೋರಿಕ್ಷಾ ಚಾಲಕರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ಸೌಲಭ್ಯ ವಿಸ್ತರಿಸಿ ಆದೇಶಿಸಿದ್ದು,
ಫಲಾನುಭವಿಗಳು ಯೋಜನೆಯ ಪ್ರಯೋಜನ ಪಡೆಯಬಹುದು.

ಎಲ್ಲೋ ಬೋರ್ಡ್ ಟ್ಯಾಕ್ಸಿ ಚಾಲಕರ ಮತ್ತು ಆಟೋರಿಕ್ಷಾ ಚಾಲಕರ ಮಕ್ಕಳಿಗೆ ಮೆಟ್ರಿಕ್ ನಂತರದ ಉನ್ನತ ವಿದ್ಯಾಭ್ಯಾಸವನ್ನು ಉತ್ತೇಜಿಸುವ ಸಲುವಾಗಿ ವಿದ್ಯಾನಿಧಿ ಯೋಜನೆಯನ್ನು ವಿಸ್ತರಿಸಲಾಗಿದೆ. 2022-23ನೇ ಸಾಲಿನ ಆರ್ಥಿಕ ವರ್ಷದಿಂದ ಅನ್ವಯವಾಗುತ್ತದೆ.

ಹೆಚ್ಚಿನ ಮಾಹಿತಿಗೆ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾAಶ ಅಥವಾ ಮಾರ್ಚ್ 18ರೊಳಗಾಗಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿ, ತುಮಕೂರು. ಇಲ್ಲಿಗೆ ಸಂಪರ್ಕಿಸಿ.