ಜಿಲ್ಲೆ

ಮಹಿಳಾ ಪಿಎಸ್‌ಐಗೆ ಲೈಂಗಿಕ ಕಿರುಕುಳ ನೀಡಿದ ಯುವಕ; ಠಾಣೆಯಲ್ಲಿ ಪ್ರಕರಣ ದಾಖಲು

ತುಮಕೂರು: ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ವತಿಯಿಂದ ಇತ್ತೀಚೆಗೆ ಹಮ್ಮಿಕೊಂಡಿದ್ದ ಹಿಂದೂ ಗಣೇಶೋತ್ಸವದಲ್ಲಿ ಬಂದೂಬಸ್ತ್ ಸೇವೆಯಲ್ಲಿದ್ದು ಮಹಿಳಾ ಪಿಎಸ್‌ಐಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಮೇಲೆ ದರ್ಶನ್(26) ಎಂಬಾತನ ವಿರುದ್ಧ ಮಹಿಳಾ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ನಗರದ ಎಂ.ಜಿ.ರಸ್ತೆಯಲ್ಲಿ ಮೆರವಣಿಗೆ ಸಾಗುತ್ತಿದ್ದ ಸಂದರ್ಭದಲ್ಲಿ ಎದೆಯ ಭಾಗಕ್ಕೆ ಕೈಹಾಕಿ ಎಳೆದಿರುವ ಬಗ್ಗೆ ಮಹಿಳಾ ಪಿಎಸ್‌ಐ ಠಾಣೆಯಲ್ಲಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಕಾರ್ಯಕರ್ತನ ವಿರುದ್ಧ ಕೇಸ್ ದಾಖಲಿಸಲಾಗಿದೆ.

ನಗರದ ಕುವೆಂಪು ನಗರದ ನಿವಾಸಿಯಾಗಿರುವ ದರ್ಶನ್ ಗಣೇಶೋತ್ಸವದಲ್ಲಿ ಸ್ನೇಹಿತರೊಂದಿಗೆ ಭಾಗವಹಿಸಿದ್ದ ಎನ್ನಲಾಗಿದೆ.