ಜಿಲ್ಲೆ

ಗಾರ್ಮೆಂಟ್ಸ್ ಬಸ್ ಹಾಗೂ ಟಿಪ್ಪರ್ ಮುಖಾಮುಖಿ; 10ಕ್ಕು ಹೆಚ್ಚು ಮಹಿಳಾ ಕಾರ್ಮಿಕರು ಗಾಯ

ಡಾ.ಶ್ರೀಹರ್ಷ ಸೋರಲಮಾವು

ಕೊರಟಗೆರೆ: ಗಾರ್ಮೆಂಟ್ಸ್ ಬಸ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ 10ಕ್ಕು ಹೆಚ್ಚು ಮಹಿಳಾ ಕಾರ್ಮಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಕೂದಲೆಳೆ ಅಂತರದಲ್ಲಿ ಭಾರೀ ದುರಂತ ತಪ್ಪಿರುವ ಘಟನೆ ಸೋಮವಾರ ಸಂಜೆ ಪಟ್ಟಣದ ಬೈಪಾಸ್ ಬಳಿ ನಡೆದಿದೆ.

ತುಮಕೂರಿನ ಗಾರ್ಮೆಂಟ್ಸ್ ಒಂದರಲ್ಲಿ ಕೆಲಸ ಮುಗಿಸಿ ಕಂಪನಿಯ ಬಸ್‌ನಲ್ಲಿ ಮನೆಗೆ ಮರಳುತ್ತಿದ್ದಾಗ ಈ ಅವಘಡ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. 50ಕ್ಕು ಹೆಚ್ಚು ಮಹಿಳಾ ಕಾರ್ಮಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ.

ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಮಾಜಿ ಶಾಸಕ ಪಿ.ಆರ್.ಸುಧಾಕರಲಾಲ್ ತಕ್ಷಣವೇ ಗಾಯಾಳುಗಳ ನೆರವಿಗೆ ಧಾವಿಸಿ ತಮ್ಮ ಕಾರಿನ¯್ಲೆÃ ಆಸ್ಪತ್ರೆಗೆ ರವಾನಿಸಿ ಮಾನವೀಯತೆ ಮೆರೆದಿದ್ದಾರೆ.

ಅಲ್ಲದೆ, ಅಪಘಾತದಿಂದ ಗಾಬರಿಗೊಂಡಿದ್ದ ಗಾರ್ಮೆಂಟ್ಸ್ ನೌಕರರಿಗೆ ಧೈರ್ಯ ತುಂಬಿದ್ದಲ್ಲದೆ, ಮನೆಗಳಿಗೆ ತೆರಳಲು ಪ್ರತ್ಯೇಕ ವಾಹನ ಸಹ ವ್ಯವಸ್ಥೆ ಮಾಡಿಕೊಟ್ಟರು. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.