ಯಲ್ಲಾಪುರ: ಮಹೇಂದ್ರ ಪಿಕಪ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ಪಟ್ಟಣದ ಜೋಡುಕೆರೆ ಬಳಿ ಪೊಲೀಸರು ರಕ್ಷಿಸಿದ್ದಾರೆ. ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ.
ಹಾವೇರಿ ಜಿಲ್ಲೆಯ ಗಬ್ಬೂರಿನ ಫಕೀರಪ್ಪ ಗುಡ್ಡಪ್ಪ ದೊಡ್ಡಮನಿ ಹಾಗೂ ಹಾನಗಲ್ಲಿನ ಮಂಜು ಫಕೀರಪ್ಪ ಹರಿಜನ ಬಂಧಿತರು. ಇವರು ವಾಹನದಲ್ಲಿ 6 ಎತ್ತುಗಳನ್ನು ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆಗೆ ಸಾಗಿಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದಾರೆ. ಎತ್ತುಗಳನ್ನು ರಕ್ಷಿಸಿ, ವಾಹನ ವಶಪಡಿಸಿಕೊಂಡ ಪೊಲೀಸರು, ಆರೋಪಿಗಳನ್ನು ಬಂಧಿಸಿದ್ದಾರೆ. ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.