ಹುಬ್ಬಳ್ಳಿ: ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ತಡರಾತ್ರಿ ನಗರದ ಹೊರವಲಯದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಆನಂದ ನಾಯಕರ (34), ಈರಣ್ಣ ಬಡಿಗೇರ (36) ಮೃತರು. ಇವರು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಆಸ್ತಕಟ್ಟಿ ಗ್ರಾಮದ ನಿವಾಸಿಗಳು ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ದಕ್ಷಿಣ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.