ಬೆಳಗಾವಿ: ತಾಲೂಕಿನ ಕಾಕತಿ ಗ್ರಾಮದಲ್ಲಿ ಈಚೆಗೆ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಬಾಲಕರನ್ನು ಪೊಲೀಸರು ಬಂಧಿಸಿದ್ದಾರೆ.
ಕಾಕತಿಯ ಮಾನ್ವಿಕಾ ಎಂಟರ್ಪೆಸಸ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಮುಕೇಶಕುಮಾರ ಶಂಕರ ಪಾಂಡೆೆ (34) ಎಂಬುವವರನ್ನು ಅದೇ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಬಾಲಕರು ಆ.7ರಂದು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿ ತಲೆಮರೆಸಿಕೊಂಡಿದ್ದರು. ಈ ಕುರಿತು ಕಾಕತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಕೈಗೊಂಡ ಪೊಲೀಸರು ಗುರುವಾರ ಉತ್ತರ ಪ್ರದೇಶದ ಅಲಿರ ಜಿಲ್ಲೆಯಲ್ಲಿ ಓರ್ವ ಹಾಗೂ ಕಾಕತಿಯಲ್ಲಿ ಮತ್ತೋರ್ವ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.