ಜಿಲ್ಲೆ

ಕುಮದ್ವತಿ ನದಿಯಲ್ಲಿ ಮುಳಗಿ ಇಬ್ಬರು ಬಾಲಕರು ಸಾವು

Gadag - Desk - Tippanna Avadoot

ರಾಣೆಬೆನ್ನೂರ: ಕುಮದ್ವತಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ಮೃತಪಟ್ಟ ಘಟನೆ ತಾಲೂಕಿನ ಲಿಂಗದಹಳ್ಳಿ ಗ್ರಾಮದ ಬಳಿ ಬುಧವಾರ ಸಂಜೆ ನಡೆದಿದೆ.

ಗ್ರಾಮದ ರಾಕೇಶ ಬಸಪ್ಪ ಕೂಲೇರ (12) ಸಂತೋಷ ಬಸವರಾಜ ಚನ್ನಗೌಡ್ರ (12) ಮೃತಪಟ್ಟ ಬಾಲಕರು.

ಇವರಿಬ್ಬರು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಆರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು.

ಸಂಜೆ ಸ್ನಾನಕ್ಕೆಂದು ನದಿಗೆ ತೆರಳಿದ್ದು, ಈ ಸಮಯದಲ್ಲಿ ಈಜು ಬಾರದೆ ನೀರಿನಲ್ಲಿ ಮುಳಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಇಬ್ಬರು ಬಾಲಕರ ಮೃತದೇಹಗಳನ್ನು ಹೊರಗೆ ತೆಗೆದಿದ್ದಾರೆ. ಘಟನಾ ಸ್ಥಳದಲ್ಲಿ ಮೃತ ಬಾಲಕರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು. ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.