ಸಾಂದರ್ಭಿಕ ಚಿತ್ರ  
ಜಿಲ್ಲೆ

ರಾಜ್ಯದಲ್ಲಿ 2 ದಿನ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಸೂಚನೆ

Webdesk - Manjunatha B

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎರಡು ದಿನ ಗುಡುಗು ಮಿಂಚು ಸಹಿತ ಮಳೆ ಬೀಳುವ ಸಾಧ್ಯತೆ ಇದೆ. ಶನಿವಾರ ಬೆಳಗಾವಿ ಸೇರಿ ಹಲವಡೆ ಸಾಧಾರಣ ಮಳೆ ಬಿದ್ದಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು, ಬೀದರ್, ವಿಜಯಪುರ, ಬೆಳಗಾವಿ, ಬಾಗಲಕೋಟೆ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಏ.9ರಿಂದ ಏ.10ರವರೆಗೆ ಹಗುರದಿಂದ ಕೂಡಿದ ಸಾಧಾರಣ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಉಳಿದ ಪ್ರದೇಶಗಳಲ್ಲಿ ಒಣಹವೆ ಮುಂದುವರಿಯಲಿದೆ.

ಏರಿದ ತಾಪಮಾನ

ಶನಿವಾರ ಹಂಪಿಯಲ್ಲಿ ಗರಿಷ್ಠ ತಾಪಮಾನದಲ್ಲಿ 37.3 ಡಿಗ್ರಿ ಸೆಲ್ಸಿಯಸ್, ಬಾಗಲಕೋಟೆಯಲ್ಲಿ ಕನಿಷ್ಠ ತಾಪಮಾನದಲ್ಲಿ 15.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಮೂರ‌್ನಾಲ್ಕು ದಿನಗಳಿಂದ ರಾಜ್ಯದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಲ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗಿದ್ದ ಉಷ್ಣಾಂಶ ತುಸು ಕುಸಿತವಾಗಿದೆ.