ಇಂಡಿ ತಾಲೂಕಿನ ಬಬಲಾದಿ ಗ್ರಾಮದ ಬಳಿ ಟ್ರಾೃಕ್ಟರ್-ಕ್ರೂಸರ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಕ್ರೂಸರ್ ನಜ್ಜುಗುಜ್ಜಾಗಿರುವುದು. 
ಜಿಲ್ಲೆ

ರಸ್ತೆ ಅಪಘಾತದಲ್ಲಿ ಇಬ್ಬರ ದುರ್ಮರಣ

ದತ್ತಾತ್ರೇಯ ಪಿ ಕುಲಕರ್ಣಿ

ಇಂಡಿ: ಕಟ್ಟಿಗೆ ಸಾಗಾಟ ಮಾಡುತ್ತಿದ್ದ ಟ್ರಾೃಕ್ಟರ್ ಹಾಗೂ ಕ್ರೂಸರ್ ಮಧ್ಯೆ ತಾಲೂಕಿನ ಬಬಲಾದಿ ಗ್ರಾಮದ ಬಳಿ ಗುರುವಾರ ರಾತ್ರಿ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಸರ್ ಮೊದಲು ಟ್ರಾೃಕ್ಟರ್‌ಗೆ ಡಿಕ್ಕಿ ಹೊಡೆದು ನಂತರ ಮರಕ್ಕೆ ಗುದ್ದಿದೆ. ಅಪಘಾತದ ಭೀಕರತೆಗೆ ಕ್ರೂಸರ್‌ನಲ್ಲಿದ್ದ ಚಡಚಣ ತಾಲೂಕಿನ ಲಮಾನಹಟ್ಟಿ ಗ್ರಾಮದ ಅಮಸಿದ್ದ ಬಂಡೆ (27), ರೇವಣಸಿದ್ದ ಜಾತಗೊಂಡ (14) ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಇಂಡಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಲಬುರ್ಗಿ ಜಿಲ್ಲೆ ಅಫಜಲಪುರ ತಾಲೂಕಿನ ಮಣೂರು ಮಲ್ಲಮ್ಮ ದೇವರ ದರ್ಶನ ಮಾಡಿಕೊಂಡು ಹಿಂತಿರುಗುವಾಗ ದುರ್ಘಟನೆ ಸಂಭವಿಸಿದೆ. ಹೊರ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.