ಜಿಲ್ಲೆ

ಲಾರಿಗಳ ಮಧ್ಯೆ ಅಪಘಾತದಲ್ಲಿ ಚಾಲಕರಿಬ್ಬರು ಮೃತ್ಯು

Dakshina Kannada

ಮಂಗಳೂರು: ನಗರದ ಹೊರವಲಯದ ಗುರುಪುರ-ಕೈಕಂಬ ಬಳಿಯ ಇಳಿಜಾರು ಪ್ರದೇಶದಲ್ಲಿ ಸೋಮವಾರ ಬೆಳಗ್ಗಿನ ಜಾವ ಎರಡು ಲಾರಿಗಳ ನಡುವೆ ಭೀಕರ ಅಪಘಾತ ಸಂಭವಿಸಿ, ಚಾಲಕರಿಬ್ಬರು ಮೃತಪಟ್ಟಿದ್ದಾರೆ.

ಮೂಡುಬಿದಿರೆ ಕಡೆಯಿಂದ ಮಣ್ಣು ಹೊತ್ತು ಬರುತ್ತಿದ್ದ ಲಾರಿ ಹಾಗೂ ಗುರುಪುರ ಕಡೆಯಿಂದ ಹೋಗುತ್ತಿದ್ದ ಆಂಧ್ರಪ್ರದೇಶದ ಲಾರಿ ನಡುವೆ ಇಳಿಜಾರು ಪ್ರದೇಶದಲ್ಲಿ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿದ್ದು, ರಸ್ತೆ ಬದಿಯ ಹೊಂಡಕ್ಕೆ ಇಳಿದು ನಿಂತ ಪರಿಣಾಮ ಚಾಲಕರನ್ನು ಹೊರತೆಗೆಯಲು ಹರಸಾಹಸ ಪಡಬೇಕಾಯಿತು. ಬೆಳಗ್ಗಿನ ಸಮಯದಲ್ಲಿ ವಾಹನ ದಟ್ಟಣೆ ಏರ್ಪಟ್ಟಿತು.