ಶಿವಮೊಗ್ಗ: ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಉಪನ್ಯಾಸಕರು ನೀರು ಪಾಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ತೀರ್ಥಮತ್ತೂರು ಗ್ರಾಮದಲ್ಲಿ ನಡೆದಿದೆ.
ಕಾರ್ಕಳದ ನಿಟ್ಡೆ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಪುನೀತ್(38), ಬಾಲಾಜಿ(36) ತುಂಗಾ ನದಿಯಲ್ಲಿ ಈಜಲು ತೆರಳಿದ್ದರು. ಈ ವೇಳೆ ಇಬ್ಬರು ನಾಪತ್ತೆಯಾಗಿದ್ಧಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಉಪನ್ಯಾಸಕರು ತಮ್ಮ ಸ್ನೇಹಿತರ ಜೊತೆಗೆ ತೀರ್ಥಹಳ್ಳಿಗೆ ಪ್ರವಾಸಕ್ಕೆಂದು ಬಂದಿದ್ದರು. ತೀರ್ಥಮತ್ತೂರು ಮಠದ ಸಮೀಪ ಇರುವ ಹೋಂ ಸ್ಟೇನಲ್ಲಿ ತಂಗಿದ್ದರು.
ಭಾನುವಾರ ಬೆಳಗ್ಗೆ ಪುನೀತ್ ಹಾಗೂ ಬಾಲಾಜಿ ತುಂಗಾ ನದಿಯಲ್ಲಿ ಈಜಲು ತೆರಳಿದ್ದರು. ಈ ವೇಳೆ ಇಬ್ಬರು ನಾಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುವ ವೇಳೆ ಬಾಲಾಜಿ ಅವರ ಮೃತದೇಹ ಪತ್ತೆಯಾಗಿದೆ. ನೀರು ಪಾಲಾದ ಪುನೀತ್ ಅವರ ಹಹುಡುಕಾಟದಲ್ಲಿ ಅಗ್ನಿಶಾಮಕ ಇಲಾಖೆ ಸಿಬ್ಬಂದಿ ನಿರತರಾಗಿದ್ದಾರೆ ಎಂದು ತಿಳಿಸಿದ್ಧಾರೆ.