ಯಳಂದೂರು: ಪಟ್ಟಣದ ಅರಣ್ಯ ಇಲಾಖೆ ಕಚೇರಿಯ ಮುಂಭಾಗದ ರಾಷ್ಟ್ರೀಯ ಹೆದ್ದಾರಿ 948 ರಲ್ಲಿ ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಗಾಯಗೊಂಡಿದ್ದಾರೆ.
ತಾಲೂಕಿನ ಹೊನ್ನೂರು ಗ್ರಾಮದ ನಿವಾಸಿ ರಂಜನ್ ಮತ್ತು ಪತ್ನಿ ಚೈತ್ರಾ ಬೈಕ್‌ನಲ್ಲಿ ಪಟ್ಟಣದ ನ್ಯಾಯಾಲಯಕ್ಕೆ ಬಂದಿದ್ದು, ಕೆಲಸ ಮುಗಿದ ಬಳಿಕ ಹೊನ್ನೂರು ಗ್ರಾಮಕ್ಕೆ ಹಿಂದಿರುಗುತ್ತಿದ್ದರು.
ಈ ವೇಳೆ ಪಟ್ಟಣದ ಅರಣ್ಯ ಇಲಾಖೆ ಕಚೇರಿ ಮುಂಭಾಗ ರಾಷ್ಟ್ರೀಯ ಹೆದ್ದಾರಿಯ ತಿರುವಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಕೂಡಲೇ ಇಬ್ಬರು ಕೆಳಕ್ಕೆ ಬಿದ್ದಿದ್ದಾರೆ.
ಬಳಿಕ ಗಾಯಾಳುಗಳಿಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಚಾಮರಾಜನಗರದ ಸಿಮ್ಸ್‌ಗೆ ದಾಖಲಿಸಲಾಗಿದೆ. ಚೈತ್ರಾ ಅವರಿಗೆ ಮೂಳೆ ಮುರಿದಿದ್ದು, ರಕ್ತಗಾಯವಾಗಿದೆ. ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.