ಜಿಲ್ಲೆ

ಅಪಘಾತದಲ್ಲಿ ಚಾಲಕ, ಕ್ಲೀನರ್ ಸಾವು: ನಗರದ ಹೊರವಲಯದಲ್ಲಿ ಅವಘಡ

ಕೆ.ಎನ್.ರಾಘವೇಂದ್ರ

ಮಂಡ್ಯ: ಬೆಂಗಳೂರು-ಮೈಸೂರು ಹೆದ್ದಾರಿಯ ನಗರದ ಹೊರವಲಯದ ಶ್ರೀನಿವಾಸಪುರ ಗೇಟ್ ಸಮೀಪ ಶನಿವಾರ ಮುಂಜಾನೆ ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಚಾಲಕ, ಕ್ಲೀನರ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಪಶ್ಚಿಮ ಬಂಗಾಳ ಮೂಲದ ಹಿಂಬದಿ ಲಾರಿ ಚಾಲಕ ಸೈಯದ್ ಮಂಡಲ್(25), ಕ್ಲೀನರ್ ಸಿರಾಜುದ್ದೀನ್(24) ಮೃತಪಟ್ಟವರು. ಈ ಎರಡು ಲಾರಿಗಳು ಬೆಂಗಳೂರು ಕಡೆಯಿಂದ ಮೈಸೂರಿಗೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಹಿಂಬದಿ ಲಾರಿಯ ಮುಂದಿನ ಭಾಗ ಸಂಪೂರ್ಣ ನಜ್ಜುಗುಜ್ಜಾಗಿತ್ತು. ಘಟನೆ ಸಂಬಂಧ ಮಂಡ್ಯ ಸೆಂಟ್ರಲ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.