ಜಿಲ್ಲೆ

ಅಪಘಾತದಲ್ಲಿ ಗೋವಾದ ಇಬ್ಬರ ಸಾವು

ಗಂಗಾಧರ ಬಿ ವಿ

ಚನ್ನಪಟ್ಟಣ: ತಾಲೂಕಿನ ಕೋಲೂರು ಸಮೀಪದ ಎಕ್ಸ್​ಪ್ರೆಸ್​ ಹೈವೇಯಲ್ಲಿ ಬುಧವಾರ ರಾತ್ರಿ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಗೋವಾದ ಡಾರೇಲ್​ ನೋವಾ ಅಲೇನ್​ ವ್ಭೆಜ್​(56) ಹಾಗೂ ರಾಸ್​ ್ರಾನ್ಸಿಸ್​ ವೆಬಜ್​(44) ಮೃತರು. ನೀಲ್​ ರಿಯಾ, ನತನ್​ಎಟ್​ ಮಿಮೊಜ್​ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ನಾಲ್ವರು ಸ್ನೇಹಿತರು ಪ್ರವಾಸಕ್ಕಾಗಿ ರಾಜ್ಯಕ್ಕೆ ಬಂದಿದ್ದರು.

ಬೆಂಗಳೂರಿನಿಂದ ಮೈಸೂರು ಕಡೆಗೆ ಹೆದ್ದಾರಿಯಲ್ಲಿ ಹೊರಟಿದ್ದ ಕಾರು ಅಡ್ಡಬಂದ ಕ್ಯಾಂಟರ್​ಗೆ ಡಿಕ್ಕಿ ಹೊಡೆದಿದೆ. ಈ ರಭಸಕ್ಕೆ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಕಾರು ಸಂಪೂರ್ಣ ಜಖಂಗೊಂಡಿದೆ. ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀೆ ನಡೆಸಿದ ಬಳಿಕ ಕುಟುಂಬಸ್ಥರಿಗೆ ಮೃತದೇಹಗಳನ್ನು ಹಸ್ತಾಂತರಿಸಲಾಗಿದೆ. ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಾಯಾಳು ನೀಲ್​ ರಿಯಾ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.