ಸ್ಥಳಕ್ಕೆ ಜಿಲ್ಲಾ ಎಸ್ಪಿ ಸಿ.ಕೆ. ಬಾಬಾ, ಡಿವೈಎಸ್​ಪಿ ಮಲ್ಲೇಶ್​, ಸಂಚಾರಿ ವೃತ್ತ ನಿರೀಕ್ಷಕ ಶ್ರೀಕಂಠಯ್ಯ ಪರಿಶೀಲನೆ ನಡೆಸಿದರು. 
ಜಿಲ್ಲೆ

ರಸ್ತೆ ಅಪಘಾತದಲ್ಲಿ ಸಹೋದರಿಯರಿಬ್ಬರು ಸಾವು

ಬೆಂಗಳೂರು ಗ್ರಾಮಾಂತರ ಡೆಸ್ಕ್

ಹೊಸಕೋಟೆ/ನಂದಗುಡಿ : ಹೊಸಕೋಟೆ ತಾಲೂಕಿನ ನಂದಗುಡಿಯ ಚಿಂತಾಮಣಿ&ಹೊಸಕೋಟೆ ರಾಜ್ಯ ಹೆದ್ದಾರಿ ಶಿವನಾಪುರ ಕ್ರಾಸ್​ ಬಳಿ ಶುಕ್ರವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಹೋದರಿಯರಿಬ್ಬರು ಮೃತಪಟ್ಟಿದ್ದಾರೆ. ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿ ಹೋಬಳಿಯ ಅತ್ತಿವಟ್ಟ ಗ್ರಾಮದ ನಿವಾಸಿಗಳಾದ ಶೈಲಜಾ (25), ಶ್ವೇತಾ (22) ಮೃತರು.

ಟನೆ ವಿವರ: ಮೃತ ಯುವತಿಯರು ತಂದೆ&ತಾಯಿ ಜತೆ 2 ದ್ವಿಚಕ್ರ ವಾಹನದಲ್ಲಿ ಕೈವಾರಕ್ಕೆ ಹೋಗಿ ಸ್ವಗ್ರಾಮಕ್ಕೆ ವಾಪಸ್ಸಾಗುತ್ತಿದ್ದಾಗ ಚಿಂತಾಮಣಿ&ಹೊಸಕೋಟೆ ರಾಜ್ಯ ಹೆದ್ದಾರಿ ಶಿವನಾಪುರ ಕ್ರಾಸ್​ ಬಳಿ ಯುವತಿಯರು ಚಲಾಯಿಸುತ್ತಿದ್ದ ದ್ವಿಚಕ್ರ ವಾಹನ ನಿಯಂತ್ರಣ ಕಳೆದುಕೊಂಡು ರಸ್ತೆಯಲ್ಲಿ ಬಿದ್ದಿದ್ದು, ಹಿಂದಿನಿಂದ ಬರುತ್ತಿದ್ದ ಕ್ಯಾಂಟರ್​ ವಾಹನದ ಚಕ್ರಕ್ಕೆ ಶೈಲಜಾಳ ಮೇಲೆ ಹರಿದಿದ್ದರೆ, ಶ್ವೇತಾ ತಲೆ ರಸ್ತೆಗೆ ಅಪ್ಪಳಿಸಿದ್ದರಿಂದ ಗಂಭೀರ ಗಾಯಗೊಂಡಿದ್ದಾರೆ. ಸ್ಥಳಿಯರ ನೆರವಿನೊಂದಿಗೆ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಹೊಸಕೋಟೆ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಮೃತದೇಹಗಳನ್ನು ಮರಣೋತ್ತರ ಪರೀೆಗೆ ರವಾನಿಸಿದರು. ಟನಾ ಸ್ಥಳಕ್ಕೆ ಜಿಲ್ಲಾ ಎಸ್ಪಿ ಸಿ.ಕೆ. ಬಾಬಾ, ಡಿವೈಎಸ್​ಪಿ ಮಲ್ಲೇಶ್​, ಸಂಚಾರಿ ವೃತ್ತ ನಿರೀಕ್ಷಕ ಶ್ರೀಕಂಠಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೊಸಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.