ಜಿಲ್ಲೆ

ಹೈಸ್ಕೂಲ್​ ವಿದ್ಯಾರ್ಥಿಗಳು ಚಲಾಯಿಸುತ್ತಿದ್ದ Car Accident; ಇಬ್ಬರು ಸಾವು, ಮತ್ತಿಬ್ಬರು ಗಂಭೀರ

ಗದಗ: ಹೈಸ್ಕೂಲ್​ ವಿದ್ಯಾರ್ಥಿಗಳು ಚಲಾಯಿಸುತ್ತಿದ್ದ ಕಾರು ಅಪಘಾತ್ಕಕೀಡಾಗಿ (Car Accident) ಇಬ್ಬರು ಮೃತಪಟ್ಟಿರುವ ಘಟನೆ ಗದಗ ತಾಲ್ಲೂಕಿನ ಹುಲಕೋಟಿ ರೂರಲ್ ಇಂಜಿನಿಯರಿಂಗ್ ಕಾಲೇಜ್ ಬಳಿ ಘಟನೆ ನಡೆದಿದೆ. ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರನ್ನು ಮಹಮ್ಮದ್ ಮುಜಾವರ್ (16), ಸಂಜೀವ್ ಗಿರಡ್ಡಿ (16) ಎಂದು ಗುರುತಿಸಲಾಗಿದ್ದು, ಆಶಿಸ್ ಗುಂಡುರ್ (16) ಸೇರಿದಂತೆ ಮತ್ತೋರ್ವ ವಿದ್ಯಾರ್ಥಿ ಅಪಘಾತದಲ್ಲಿ (Car Accident) ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನೆ ಕುರಿತು ಮಾಹಿತಿ ನೀಡಿರುವ ಪೊಲೀಸ್​ ಅಧಿಕಾರಿಯೊಬ್ಬರು, ಶಾಲಾ ವಾರ್ಷಿಕೋತ್ಸವ ಮುಗಿಸಿ ವಾಪಸ್​ ಬರುವ ವೇಳೆ ದುರ್ಘಟನೆ ಸಂಭವಿಸಿದ್ದು, ನಾಲ್ಕು ಜನ ವಿದ್ಯಾರ್ಥಿಗಳಿದ್ದರು ಎಂದು ತಿಳಿದು ಬಂದಿದೆ. ಅತಿವೇಗ ಚಾಲನೆಯೇ ದುರ್ಘಟನೆಗೆ ಕಾರಣ ಎಂದು ಹೇಳಲಾಗಿದ್ದು, ಹುಲಕೋಟಿ ರಾಜೇಶ್ವರಿ ವಿದ್ಯಾನಿಕೇತನ ಶಾಲೆಯಲ್ಲಿ ವಿದ್ಯಾರ್ಥಿಗಳು 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದರು.

ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಮೃತರ ದೇಹಗಳು ಹಾಗೂ ಓರ್ವ ಗಾಯಾಳು ಗದಗ ಜಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಗದಗ ಗ್ರಾಮಾಂತರ ಪೊಲೀಸ್​ ಠಾಣೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.