ನೆಲಮಂಗಲ: ಬೈಕ್-ಲಾರಿ ಭೀಕರ ಅಪಘಾತದಲ್ಲಿ ವಿದ್ಯಾರ್ಥಿಗಳಿಬ್ಬರು ದಾರುಣ ಸಾವು ಕಂಡಿದ್ದಾರೆ. ಲಾರಿಯವ ಬೈಕ್ ಗುದ್ದಿದ್ದಲ್ಲದೆ ಅಪಘಾತದ ಬಳಿಕ ಪರಾರಿಯಾಗಿದ್ದಾನೆ. ಬೆಂಗಳೂರು ಉತ್ತರ ತಾಲೂಕು ತುಮಕೂರು ರಸ್ತೆಯ ಚಿಕ್ಕಬಿದರಕಲ್ಲು ಬಳಿ ಈ ಘಟನೆ ಸಂಭವಿಸಿದೆ.
ಬೆಂಗಳೂರಿನ ವಿದ್ಯಾರ್ಥಿಗಳಾದ ಅಭಿಷೇಕ್ (18) ಮತ್ತು ವರ್ಷಿತಾ (18) ಮೃತಪಟ್ಟವರು. ಅಪಘಾತಕ್ಕೆ ಒಳಗಾಗಿ ಗಂಭೀರ ಗಾಯಗೊಂಡ ವಿದ್ಯಾರ್ಥಿಗಳನ್ನು ತಕ್ಷಣ ಹತ್ತಿರದ ಎರಡು ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಅವರು ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದರು.
ಅಪಘಾತಕ್ಕೆ ಕಾರಣವಾಗಿರುವ ಲಾರಿ ಚಾಲಕ ವಾಹನ ಸಮೇತ ಪರಾರಿಯಾಗಿದ್ದು, ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.