ಕೋಲಾರ: ನಗರದ ಬ್ರಾಹ್ಮಣರ ಬೀದಿಯಲ್ಲಿ ಎರಡು ದಿನದ ಹಿಂದೆ ಮನೆ ಹೊರಗಿದ್ದ ಲಕ್ಷ್ಮಿಕಾಂತಮ್ಮ ಎಂಬುವವರ ಸರ ಕದ್ದು ಪರಾರಿಯಾಗಿದ್ದ ಇಬ್ಬರನ್ನು ನಗರಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ನಗರದ ವೀರಾಂಜನೇಯ ನಗರದ ಹರೀಶ್ ಮತ್ತು ವಾಸು ಬಂಧಿತರು. ಗುರುವಾರ ಲಕ್ಷ್ಮಿಕಾಂತಮ್ಮ ಮನೆಯ ಹೊರಗೆ ಓಡಾಡುತ್ತಿದ್ದಾಗ ಬೈಕ್ನಲ್ಲಿ ಬಂದಿದ್ದ ಸರಗಳ್ಳರು 60ಗ್ರಾಂ ಚಿನ್ನದ ಸರ ಕಸಿದು ಪರಾರಿಯಾಗಿದ್ದರು. ಕೂಡಲೇ ಸ್ಥಳಕ್ಕಾಗಮಿಸಿದ್ದ ಪೊಲೀಸರು ಬ್ರಾಹ್ಮಣರ ಬೀದಿಯ ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಿದ್ದರು. ನಂತರ ವೃತ್ತ ನಿರೀಕ್ಷಕ ರಾಘವೇಂದ್ರ ಪ್ರಕಾಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದಾಗ ಇಬ್ಬರೂ ಸಿಕ್ಕಿಬಿದ್ದಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದು, ಬಂಧಿತರಿಂದ ಸರ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.