ಜಿಲ್ಲೆ

ಸುಳ್ಯ ತಾಲೂಕಿನ ಮಳೆ ಹಾನಿಗೆ ಪ್ರತ್ಯೇಕ ಪರಿಹಾರ ಪ್ಯಾಕೇಜ್ ಘೋಷಣೆಗೆ ಯು.ಟಿ.ಖಾದರ್ ಒತ್ತಾಯ

ಮಂಗಳೂರು: ಸುಳ್ಯ ತಾಲೂಕಿನಲ್ಲಿ ಆಗಿರುವ ಮಳೆ ಹಾನಿಗೆ ರಾಜ್ಯ ಸರ್ಕಾರ ಪ್ರತ್ಯೇಕ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ವಿಧಾನಸಭಾ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಒತ್ತಾಯಿಸಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಅತಿವೃಷ್ಟಿಯನ್ನು ನಿಭಾಯಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಜಿಲ್ಲೆಯಲ್ಲಿ ಉನ್ನತ ಮಟ್ಟದ ಸಭೆ ಮಾಡಿಲ್ಲ. ಕೇಂದ್ರ ಸರ್ಕಾರದ ಅನುದಾನ ತರುವಲ್ಲಿ ಯಾವುದೇ ಪ್ರಯತ್ನ ಮಾಡಿಲ್ಲ ಎಂದವರು ಆರೋಪಿಸಿದರು.

ಜಿಲ್ಲೆಯಲ್ಲಿ ಶಾಂತಿ ಕಾಪಾಡುವ ಉದ್ದೇಶದಿಂದ ಕೆಲವೊಂದು ನಿರ್ಬಂಧ ಹೇರಿರುವುದು ಸರಿ.ಆದರೆ ಇದರಿಂದಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಅಧಿಕಾರಿಗಳು ಈ ನಿಟ್ಟಿನಲ್ಲಿ ಪರಿಶೀಲನೆ ಮಾಡಬೇಕು ಎಂದರು.