ಮೈಸೂರು: ಗೌಸಿಯಾನಗರದ ಉಸ್ಮಾನಿಯಾ ಮಸೀದಿ ಬಳಿ ಭಾನುವಾರ ಸಂಜೆ ಅಕ್ರಮವಾಗಿ ರಾಸುಗಳನ್ನು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಉದಯಗಿರಿ ಪೊಲೀಸರು 9 ಹಸುಗಳನ್ನು ರಕ್ಷಿಸಿದ್ದಾರೆ.
ಗಸ್ತಿನಲ್ಲಿದ್ದ ಪೊಲೀಸರು ಗೂಡ್ಸ್ ವಾಹನವನ್ನು ತಡೆದು ಪರಿಶೀಲನೆಗೆ ಮುಂದದಾಗ ಹಸುಗಳನ್ನು ತುಂಬಿರುವುದು ಕಂಡುಬಂದಿದೆ.
ವಾಹನದಲ್ಲಿದ್ದ ಹೇಮಂತ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಮತ್ತೊಬ್ಬ ಪರಾರಿಯಾಗಿದ್ದಾನೆ. ವಿಚಾರಣೆ ವೇಳೆ ಹೇಮಂತ್ ಕಸಾಯಿ ಖಾನೆಗೆ ಸಾಗಿಸಲು ತೆಗೆದುಕೊಂಡು ಹೋಗುತ್ತಿರುವುದಾಗಿ ಹೇಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.