ಜಿಲ್ಲೆ

ವಿಶ್ವ ಅಂಗಾಂಗ ದಾನ‌‌ ದಿನಾಚರಣೆ, ಅಂಗಾಂಗ ದಾನಕ್ಕೆ ನಿರ್ಧರಿಸಿದ ಸಿಎಂ ಬೊಮ್ಮಾಯಿ‌

udupireporter

ಉಡುಪಿ: ವಿಶ್ವ ಅಂಗಾಂಗ ದಾನ ದಿನಾಚರಣೆ ಪ್ರಯುಕ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಶುಕ್ರವಾರ ಉಡುಪಿಯಲ್ಲಿ ಬೆಂಗಳೂರಿಗೆ ಹೊರಡುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ವಿಶ್ವ ಅಂಗಾಂಗ ದಾನ ದಿನಾಚರಣೆಯಾಗಿದೆ. ಅಂಗಾಂಗ ದಾನ ಮಾಡುವುದರಿಂದ ಜೀವ ಉಳಿಸಬಹುದು‌. ಇತ್ತೀಚಿಗೆ ಅಂಗಾಂಗ ಕಸಿ ಮಾಡುವ ತಂತ್ರಜ್ಞಾನ ಸಾಕಷ್ಟು ಅಭಿವೃದ್ಧಿಗೊಂಡಿದೆ. ಅಂಗಾಂಗ ಕಸಿ ಯಶಸ್ವಿಯಾಗುತ್ತಿದೆ. ಇದರಿಂದ ಸಾವಿರಾರು ಮಂದಿ ಜೀವ ಉಳಿಸಬಹುದು. ನಾನು ಕೂಡ ಅಂಗಾಂಗ ದಾನಕ್ಕೆ ಸಹಿ ಹಾಕುತ್ತೇನೆ.
ಎಲ್ಲರೂ ಕೂಡ ಈ ಕುರಿತು ಸಂಕಲ್ಪ ಮಾಡೋಣ. ಕಿಡ್ನಿ ,ಹಾರ್ಟ್ ,ಲಿವರ್ ಇನ್ನೊಬ್ಬರ ಉಪಯೋಗಕ್ಕೆ ಬರಲಿ
ಹೆಚ್ಚಿನ ಜನ ಅಂಗಾಂಗ ದಾನಕ್ಕೆ ಮುಂದೆ ಬರಬೇಕು ಎಂದು ಕರೆ ನೀಡಿದರು.

ರಾಜ್ಯದಲ್ಲಿ ಕರೊನಾ ನಿಯಂತ್ರಣಕ್ಕೆ
ತಜ್ಞರ ಸಲಹೆ ಪಡೆದು ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು. ತಕ್ಷಣ ತಜ್ಞರೊಂದಿಗೆ ಸಭೆ ನಡೆಸಲಾಗುವುದು.ತಜ್ಞರ ವರದಿ ಆಧಾರದಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ತಿಳಿಸಿದ್ದಾರೆ.