ಉಡುಪಿ: ನವರಾತ್ರಿ ಉತ್ಸವದ ಪ್ರಯುಕ್ತ ಜಿಲ್ಲಾ ಬಿಜೆಪಿ ಮತ್ತು ನಗರ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಶ್ರೀ ಶಾರದಾ ಪೂಜೆ ಭಾನುವಾರ ಸಂಪನ್ನಗೊಂಡಿತು.
ರಶ್ಮಿ ಭಟ್ ಅವರಿಂದ ವೀಣಾ ವಾದನ, ಮಾಯಾ ಕಾಮತ್ ಬಳಗದಿಂದ ಭಜನಾ ಸೇವೆ ನಡೆಯಿತು. ಮಹಾ ಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆಯಲ್ಲಿ ನೂರಾರು ಮಂದಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಶಾಸಕ ಯಶ್ಪಾಲ್ ಸುವರ್ಣ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ನಿಕಟಪೂರ್ವ ಶಾಸಕ ಕೆ.ರಘುಪತಿ ಭಟ್, ಬಿಜೆಪಿ ಉಡುಪಿ ನಗರ ಮಂಡಲಾಧ್ಯಕ್ಷ ಮಹೇಶ್ ಠಾಕೂರ್, ವಿಶ್ವ ಹಿಂದೂ ಪರಿಫಿತ್ ಜಿಲ್ಲಾ ಮಹಿಳಾ ಪ್ರಮುಖ್ ಪೂರ್ಣಿಮಾ ಸುರೇಶ್ ನಾಯಕ್, ಬಿಜೆಪಿ ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಗಿರೀಶ್ ಎಂ. ಅಂಚನ್, ಸುವರ್ಧನ್ ನಾಯಕ್, ಮಂಜುನಾಥ್ ಮಣಿಪಾಲ್, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಸತ್ಯಾನಂದ ನಾಯಕ್, ಶಿವಕುಮಾರ್ ಅಂಬಲಪಾಡಿ ಮೊದಲಾದವರು ಉಪಸ್ಥಿತರಿದ್ದರು.