ಜಿಲ್ಲೆ

ಏ.1ರಿಂದ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಕಾಲು ಬಾಯಿ ಲಸಿಕೆ

ಗೋಪಾಲಕೃಷ್ಣ ಪಾದೂರ್

ಉಡುಪಿ: ಜಾನುವಾರುಗಳಲ್ಲಿ ಕಂಡುಬರುವ ಕಾಲುಬಾಯಿ ರೋಗ ನಿಯಂತ್ರಣಕ್ಕೆ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಐದನೇ ಸುತ್ತಿನ ಕಾಲುಬಾಯಿ ಲಸಿಕಾ ವಿತರಣೆ ಜಿಲ್ಲೆಯಾದ್ಯಂತ ಏಪ್ರಿಲ್​ 1 ರಿಂದ 30 ರ ವರೆಗೆ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ತಿಳಿಸಿದರು.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಾನುವಾರು ಕಾಲುಬಾಯಿ ಜ್ವರ ರೋಗ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾಲುಬಾಯಿ ರೋಗ ತಡೆಗಟ್ಟಲು ಎಲ್ಲರೂ ಕಡ್ಡಾಯವಾಗಿ ಜಾನುವಾರುಗಳಿಗೆ ಲಸಿಕೆ ಹಾಕಿಸಬೇಕು. ಯಾವುದೇ ಕಾರಣಕ್ಕೂ ರ್ನಿಲಕ್ಷ$್ಯ ಮಾಡಬಾರದು. ಕಾಲುಬಾಯಿ ಲಸಿಕಾ ಕಾರ್ಯಕ್ರಮದ ಕುರಿತು ಶಾಲೆಗಳಲ್ಲಿ, ನಗರಸಭೆ ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ಕಸ ವಿಲೇವಾರಿ ವಾಹನಗಳಲ್ಲಿ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಮಾಹಿತಿ ನೀಡುವ ಮೂಲಕ ಹೆಚ್ಚು ಪ್ರಚಾರ ಕೈಗೊಳ್ಳಬೇಕು. ರೈತರಿಗೆ ಲಸಿಕಾ ಕಾರ್ಯಕ್ರಮದ ಕುರಿತು ಅರಿವು ಮೂಡಿಸುವುದರೊಂದಿಗೆ ಪ್ರತಿಶತ@ ನೂರರಷ್ಟು ಜಾನುವಾರುಗಳಿಗೆ ಲಸಿಕೆ ಹಾಕಿಸಲು ಕ್ರಮವಹಿಸಬೇಕು ಎಂದರು.

ಸಭೆಯಲ್ಲಿ ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ.ಎಂ.ಸಿ ರೆಡ್ಡಪ್ಪ, ಮಂಗಳೂರು ದಕ್ಷಿಣ ಕನ್ನಡ ಹಾಲು ಒಕ್ಕೂಟ ನಿಗಮದ ವ್ಯವಸ್ಥಾಪಕ ನಿರ್ದೇಶಕ ಚಂದ್ರಶೇಖರ್​, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಐ.ಪಿ. ಗಡಾದ, ಮಹಿಳಾ ಮತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ, ಉಪಸ್ಥಿತರಿದ್ದರು.