ಜಿಲ್ಲೆ

ಉಡುಪಿ ಜಿಲ್ಲಾ ಮಟ್ಟದ ಸ್ವಾತಂತ್ರೋತ್ಸವ; ಸಚಿವ ಸುನೀಲ್ ಕುಮಾರ್ ಧ್ವಜಾರೋಹಣ

udupireporter


ಉಡುಪಿ: ಉಡುಪಿ ಜಿಲ್ಲಾ ಮಟ್ಟದ ಸ್ವಾತಂತ್ರೊೃೀತ್ಸವ ಭಾನುವಾರ ಅಜ್ಜರಕಾಡು ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಜರಗಿತು. ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನೀಲ್ ಕುಮಾರ್ ಧ್ವಜಾರೋಹಣ ನೆರವೇರಿಸಿ ತೆರೆದ ಜೀಪ್‌ನಲ್ಲಿ ಪೆರೇಡ್ ವಂದನೆ ಸ್ವೀಕರಿಸಿದರು. ಬಳಿಕ ಸಭಾ ಕಾರ್ಯಕ್ರಮದಲ್ಲಿ 75ನೇ ಸ್ವಾತಂತ್ರೋತ್ಸವ ಸಂದೇಶ ನೀಡಿದರು. ಈಗಾಗಲೆ ಭಾರತ ವಿಶ್ವಗುರು ಪಥದಲ್ಲಿ ಸಾಗುತ್ತಿದೆ. ರಾಷ್ಟ್ರೀಯತೆ ವಿಚಾರದಲ್ಲಿ ಉಡುಪಿ ಮುಂಚೂಣಿಯಲ್ಲಿದೆ. ದೇಶಭಕ್ತಿ ಭಾಷಣದಲ್ಲಿ ಮಾತ್ರ ಸೀಮಿತವಾಗದೆ ನಡವಳಿಗೆ ನಮ್ಮ ಆಚಾರದಲ್ಲಿ ಅಳವಡಿಸಿಕೊಳ್ಳಬೇಕು. ನವ ಭಾರತ ನಿರ್ಮಾಣಕ್ಕೆ ಎಲ್ಲರೂ ಸಂಕಲ್ಪತೊಡಬೇಕು ಎಂದು ಕರೆ ನೀಡಿದರು. ಶಾಸಕ ಕೆ.ರಘುಪತಿ ಭಟ್, ನಗರಸಭೆ ಅಧ್ಯಕ್ಷೆ ಸುಮಿತ್ರ ನಾಯಕ್, ಕರಾವಳಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರಾಘವೇಂದ್ರ ಕಿಣಿ, ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲಾ ಪಂಚಾಯಿತಿ ಸಿಇಒ ಡಾ.ನವೀನ್ ಭಟ್ ವೈ, ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್.ವಿಷ್ಣುವರ್ಧನ್, ಎಡಿಸಿ ಸದಾಶಿವ ಪ್ರಭು ಇದ್ದರು.