ಉಡುಪಿ: ಹಡಿಲು ಭೂಮಿ ಕೃಷಿ ಅಂದೋಲನದಡಿ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ನಡೆಯುತ್ತಿರುವ ಹಡಿಲು ಭೂಮಿ ಕೃಷಿಯ ನಾಟಿ ಕಾರ್ಯಕ್ಕೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಚಾಲನೆ ನೀಡಿದರು.
ಕಡೆಕಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 110 ಎಕರೆ ಹಡಿಲು ಭೂಮಿಯಲ್ಲಿ ಕೃಷಿ ಮಾಡಲಾಗುತ್ತಿದೆ. ಈ ಕಾರ್ಯಕ್ಕರ ಶನಿವಾರ ಚಾಲನೆ ನೀಡಿದ ಸಚಿವ ಬಿ.ಸಿ. ಪಾಟೀಲ್, ಸ್ವತಃ ಟ್ರ್ಯಾಕ್ಟರ್ ಚಲಾಯಿಸಿ ಗಮನ ಸೆಳೆದರು.
ಶಾಸಕ ರಘುಪತಿ ಭಟ್ ಸಹ ಉಪಸ್ಥಿತರಿದ್ದರು. ನೇಜಿ ನೇಡುವ ಮೂಲಕ ರಘುಪತಿ ಭಟ್ ಯಂತ್ರಕ್ಕೆ ಚಾಲನೆ ನೀಡಿದರು.