ವಿಜಯವಾಣಿ ಸುದ್ದಿಜಾಲ ಉಡುಪಿ
ಕರಾವಳಿ ಜಂಕ್ಷನ್ನಿಂದ ಆದಿಉಡುಪಿವರೆಗೆ ಕಟ್ಟಡಗಳನ್ನು ತೆರವು ಮಾಡಿ ರಸ್ತೆ ಕಾಮಗಾರಿ ನಡೆಸಲು ಈಗಾಗಲೇ ಅವಕಾಶ ಮಾಡಿಕೊಡಲಾಗಿದೆ. ತಕ್ಷಣ ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ ನೀಡಿದರು.
ಮಲ್ಪೆ-ಆದಿಉಡುಪಿ ರಾಷ್ಟೀಯ ಹೆದ್ದಾರಿ ಕಾಮಗಾರಿ ಪ್ರಗತಿಯ ಕುರಿತಂತೆ ಕಂದಾಯ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಉಡುಪಿಯಲ್ಲಿ ಮೇ 15ರಂದು ಸಭೆ ನಡೆಸಿ ಮಾತನಾಡಿದರು.
ಸಭೆಯಲ್ಲಿ ಉಡುಪಿ ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ, ತಹಸೀಲ್ದಾರ್ ಗುರುರಾಜ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಾಯಕ ಅಭಿಯಂತ ಮಂಜುನಾಥ ನಾಯಕ, ನಗರಸಭಾ ಸದಸ್ಯರಾದ ಸುಮಿತ್ರಾ ನಾಯಕ, ಸುಂದರ ಕಲ್ಮಾಡಿ, ಶ್ರೀಶ ಕೊಡವೂರು, ಸವಿತಾ ಹರೀಶ ರಾಮ್, ಎಡ್ಲಿನ್ ಕರ್ಕಡ, ಮಲ್ಪೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.