ಜಿಲ್ಲೆ

ಉಡುಪಿ ಎಸ್‌ಪಿಯಾಗಿ ಹಾಕೆ ಅಕ್ಷಯ್ ಮಚೀಂದ್ರ ಅಧಿಕಾರ ಸ್ವೀಕಾರ

ಗೋಪಾಲಕೃಷ್ಣ ಪಾದೂರ್

ಉಡುಪಿ: ಉಡುಪಿ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹಾಕೆ ಅಕ್ಷಯ್ ಮಚೀಂದ್ರ ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ. ನಿರ್ಗಮನ ಎಸ್ಪಿ ಎನ್.ವಿಷ್ಣುವರ್ಧನ್ ಅಧಿಕಾರ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬುದ್ಧಿವಂತರ ಮತ್ತು ಪ್ರಗತಿಪರ ಉಡುಪಿ ಜಿಲ್ಲೆಯಲ್ಲಿ ಸೇವೆ ಸಲ್ಲಿಸುವುದಕ್ಕೆ ಹೆಮ್ಮೆಯಾಗುತ್ತಿದೆ. ಜಿಲ್ಲೆಯ ರಜತ ಸಂಭ್ರಮ ಸಮಯದಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿರುವುದು ಭಾಗ್ಯ. ದೇಶಾದ್ಯಂತ ಉಡುಪಿಗೆ ಉತ್ತಮ ಹೆಸರಿದೆ. ಪ್ರವಾಸೋದ್ಯಮದಲ್ಲೂ ಮುಂಚೂಣಿಯಲ್ಲಿದೆ. ಜಿಲ್ಲೆಯಲ್ಲಿ ಕೋಮು ಸೌಹಾರ್ದತೆ, ಶಾಂತಿ ಸುವ್ಯವಸ್ಥೆ ಕಾಪಾಡುವುದು ಮೊದಲ ಆದ್ಯತೆಯಾಗಿದೆ. ಡ್ರಗ್ಸ್ ಹಣ ಭಯೋತ್ಪಾದಕ ಸಂಘಟನೆಗಳಿಗೆ ಬಳಕೆಯಾಗುತ್ತಿದೆ. ಹೀಗಾಗಿ ಡ್ರಗ್ಸ್ ಮಾಫಿಯಾ ನಿಯಂತ್ರಣಕ್ಕೆ ಕ್ರಮಕೈಗೊಳ್ಳಲಾಗುವುದು. ಜನಸ್ನೇಹಿ ಪೊಲೀಸ್ ವ್ಯವಸ್ಥೆ ರೂಪಿಸಲಾಗುವುದು ಎಂದು ಹೇಳಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಲಿಂಗಪ್ಪ ಉಪಸ್ಥಿತರಿದ್ದರು.