ಅಂತಾರಾಷ್ಟ್ರೀಯ 12ನೇ ಯೋಗ ದಿನ.
* ಆರೋಗ್ಯ ಸಚಿವ ಯು.ಟಿ. ಖಾದರ್ ಉದ್ಘಾಟನೆ
* ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜನೆ
ಉಡುಪಿ: ಜಿಲ್ಲಾಡಳಿತ, ಜಿಪಂ, ಆಯುಷ್ ಇಲಾಖೆ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸ್ಕೌಟ್ಸ್ ಆ್ಯಂಡ್ ಗೈಡ್ಸ್, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ವಿವಿಧ ಯೋಗ ಸಂಸ್ಥೆಗಳ ಸಹಕಾರದಲ್ಲಿ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಜೂ.21ರಂದು ಬೆಳಗ್ಗೆ 7 ಗಂಟೆಗೆ ಅಂತಾರಾಷ್ಟ್ರೀಯ 12ನೇ ಯೋಗ ದಿನ ಕಾರ್ಯಕ್ರಮ ನಡೆಯಲಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಉದ್ಘಾಟಿಸಲಿದ್ದು, ಶಾಸಕ ಯಶ್ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್, ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜನಾಥ್ ಪೂಜಾರಿ, ಶಾಸಕರಾದ ವಿ. ಸುನೀಲಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ. ಕಿರಣಕುಮಾರ್ ಕೊಡ್ಗಿ, ಗುರ್ಮೆ ಸುರೇಶ್ ಶೆಟ್ಟಿ, ವಿಪ ಸದಸ್ಯರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರು, ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕಕುಮಾರ್ ಕೊಡವೂರು, ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ., ಜಿಪಂ ಸಿಇಒ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠ ಹರಿರಾಮ್ ಶಂಕರ್ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ಆಯುಷ್ ಅಧಿಕಾರಿಗಳ ಕಚೇರಿಯ ಪ್ರಕಟಣೆ ತಿಳಿಸಿದೆ.