ಉಡುಪಿಯಲ್ಲಿ ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆ ಆಯೋಜಿಸಿದ್ದ ರಂಗಹಬ್ಬದಲ್ಲಿ ಕುಸುಮಾ ಕಾಮತ್ ಅವರಿಗೆ 'ರಂಗ ಸಾಧಕಿ' ಪ್ರಶಸ್ತಿ ನೀಡಲಾಯಿತು. ಹರಿಪ್ರಸಾದ್ ರೈ, ದಿವಾಕರ್ ಶೆಟ್ಟಿ, ಅಧ್ಯಕ್ಷ ದಿನೇಶ್ ಸಾಲಿಯಾನ್, ಪ್ರಭಾಕರ್ ತಿಂಗಳಾಯ, ಹರೀಶ್ ಪೂಜಾರಿ, ರಾಮಚಂದ್ರ ಪೂಜಾರಿ, ಪ್ರಕಾಶ್ ಜಿ. ಕೊಡವೂರು, ವಿನಯ್ ಕಲ್ಮಾಡಿ ಇದ್ದರು.
* ಹರಿಪ್ರಸಾದ್ ರೈ ಅಭಿಪ್ರಾಯ
* ಸುಮನಸಾ ನಾಟಕೋತ್ಸವ
ಉಡುಪಿ: ಸುಮನಸಾ ಕೊಡವೂರು ಸಂಘಟನೆ ಉಡುಪಿಯ ಶ್ರೀಮಂತ ಸಾಂಸ್ಕೃತಿಕ ಕಲೆಯನ್ನು ಬೆಳೆಸುವ ಕೆಲಸ ಮಾಡುತ್ತಿದೆ. ನಡಿಗೆ, ಓಟಗಳು ದೈಹಿಕವಾಗಿ ಆರೋಗ್ಯ ಹೆಚ್ಚಿಸಿದರೆ, ರಂಗಚಟುವಟಿಕೆಗಳು ಸೃಜನಶೀಲತೆ ಹೆಚ್ಚಿಸುತ್ತವೆ. ಮಾನಸಿಕ ಒತ್ತಡ ಕಡಿಮೆಗೊಳಿಸಿ ಉತ್ತಮ ವ್ಯಕ್ತಿತ್ವ ರೂಪಿಸುತ್ತದೆ ಎಂದು ಮಣಿಪಾಲ ಎಚ್ಪಿಆರ್ ಸಮೂಹ ಸಂಸ್ಥೆಯ ಅಧ್ಯಕ್ಷ ಹರಿಪ್ರಸಾದ್ ರೈ ಅಭಿಪ್ರಾಯಪಟ್ಟರು.
ಉಡುಪಿಯ ಅಜ್ಜರಕಾಡುನಲ್ಲಿರುವ ಭುಜಂಗ ಪಾರ್ಕ್ನ ಬಯಲು ರಂಗಮಂದಿರದಲ್ಲಿ ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ ನಾಟಕೋತ್ಸವ ರಂಗಹಬ್ಬ-14ರ ಐದನೇ ದಿನವಾದ ಗುರುವಾರ (ಫೆ.26) ರಾತ್ರಿ ಆಯೋಜಿಸಿದ್ದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಬಹುಕ್ಷೇತ್ರದ ಸಾಧಕಿ ಕುಸುಮಾ ಕಾಮತ್ ಅವರಿಗೆ "ರಂಗ ಸಾಧಕಿ' ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಕೊಡವೂರುಶಿರಿಡಿ ಸಾಯಿಬಾಬ ಮಂದಿರದ ಧರ್ಮದರ್ಶಿದಿವಾಕರ್ ಶೆಟ್ಟಿ ತೋಟದಮನೆ, ಬೊಳ್ಜೆ ಶ್ರೀ ಬ್ರಹ್ಮ ಬೈದೇರುಗಳ ಗರೋಡಿ ಅಧ್ಯಕ್ಷ ದಿನೇಶ್ ಸಾಲಿಯಾನ್, ಸಿತಾರಾ ಎಂಟರ್ಪೆಸಸ್ನ ಪಾಲುದಾರಪ್ರಭಾಕರ್ ತಿಂಗಳಾಯ, ಮಲ್ಪೆಯ ಉದ್ಯಮಿ ಹರೀಶ್ ಪೂಜಾರಿ, ಉಡುಪಿ ವ್ಯಾಸ ಮುದ್ರಣ ಮಾಲೀಕ ರಾಮಚಂದ್ರ ಪೂಜಾರಿ,ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ ಅಧ್ಯಕ್ಷ ಪ್ರಕಾಶ್ ಜಿ. ಕೊಡವೂರು, ಉಪಾಧ್ಯಕ್ಷ ವಿನಯ್ ಕಲ್ಮಾಡಿ ಉಪಸ್ಥಿತರಿದ್ದರು.
ಪ್ರಜ್ಞಾಶ್ರೀ ಸ್ವಾಗತಿಸಿದರು. ಶ್ರೀವತ್ಸ ರಾವ್ ಕಾರ್ಯಕ್ರಮ ನಿರೂಪಿಸಿದರು. ಪ್ರಜ್ಞಾ ವಂದಿಸಿದರು.
ಕಲಾವಿದರಿಗೆ ಅನೇಕ ನೋವುಗಳಿರುತ್ತವೆ. ಆದರೆ, ರಂಗದ ಮೇಲೆ ಬಂದಾಗ ಎಲ್ಲ ನೋವು ಮರೆತು ಪ್ರದರ್ಶನ ನೀಡುತ್ತಾರೆ. ಕಲೆಗೆ ಭಾಷೆಯ ಹಂಗಿಲ್ಲ. ಯಾವುದೇ ಭಾಷೆಯಾದರೂ ಕಲೆ ಅರ್ಥವಾಗುತ್ತದೆ. ನನ್ನನ್ನು ಪ್ರೋತ್ಸಾಹಿಸಿದ ಎಲ್ಲರಿಗೂ ಈ ಸನ್ಮಾನ ಸಲ್ಲಲಿದೆ. ಕಠಿಣ ಪರಿಶ್ರಮ, ಶಿಸ್ತು, ಹೊಂದಾಣಿಕೆ ಇದ್ದಾಗ ಮಾತ್ರ ಮುಂದುವರಿಯಲು ಸಾಧ್ಯ. ಅವೆಲ್ಲ ಗುಣ ಸುಮನಸಾ ಕೊಡವೂರು ತಂಡದಲ್ಲಿದೆ.