ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ ಉದ್ಘಾಟಿಸಿದರು. ಜಿ.ಜಗನ್ನಾಥ ರೈ, ರಾಕೇಶ್ ರೈ ಕೆಡೆಂಜಿ, ಗಿರಿಶಂಕರ ಸುಲಾಯ ಮೊದಲಾದವರು ಉಪಸ್ಥಿತರಿದ್ದರು. 
ಉಡುಪಿ

ವ್ಯಸನದಿಂದ ದೂರವಿದ್ದು ಉತ್ತಮ ಜೀವನ

ಇಂದಿರಾ ಎನ್ ಕೆ
ಕಡಬ: ಇಂದಿನ ದಿನಗಳಲ್ಲಿ ಯುವ ಜನಾಂಗ ಫ್ಯಾಶನ್ ಜೀವನ ಮತ್ತು ಸಹವಾಸ ದೋಷದಿಂದ ಮಾದಕ ವ್ಯಸನಗಳಿಗೆ ಬಲಿಯಾಗುತ್ತಿದ್ದಾರೆ. ಯುವ ಜನಾಂಗದಲ್ಲಿ ಮಾದಕ ವ್ಯಸನಗಳಿಂದ ಉಂಟಾಗುವ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸಿದಾಗ ಅಂತಹ ವ್ಯಕ್ತಿಗಳು ಉತ್ತಮ ಜೀವನ ನಡೆಸಲು ಸಾಧ್ಯವಿದೆ ಎಂದು ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ ಹೇಳಿದರು.
ಸವಣೂರು ಪಪೂ ಕಾಲೇಜಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕಡಬ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪುತ್ತೂರು ತಾಲೂಕು ಕಾನೂನು ಸೇವೆಗಳ ಸಮಿತಿ ಹಾಗೂ ಪುತ್ತೂರು ವಕೀಲರ ಸಂಘದ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಅಂಗವಾಗಿ ಸ್ವಾಸ್ಥೃ ಸಂಕಲ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಡಬ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬದ ನಿಕಟ ಪೂರ್ವಾಧ್ಯಕ್ಷ ಮಹೇಶ್ ಕೆ. ಸವಣೂರು ಅಧ್ಯಕ್ಷತೆ ವಹಿಸಿದ್ದರು. ನೆಲ್ಯಾಡಿ ಸಂತ ಜಾರ್ಜ್ ಪಪೂ ಕಾಲೇಜಿನ ಉಪನ್ಯಾಸಕ ವಿಶ್ವನಾಥ ಶೆಟ್ಟಿ ಸಂಪನ್ಮೂಲ ವ್ಯಕ್ತಿಯಾಗಿದ್ದರು.
ಸವಣೂರು ಜೂನಿಯರ್ ಕಾಲೇಜಿನ ಗ್ರಂಥಾಲಯಕ್ಕೆ ಕಾನೂನು ಸೇವೆಗಳ ಪ್ರಾಧಿಕಾರದಿಂದ ಪ್ರಕಟಗೊಂಡ ಕಾನೂನು ಪುಸ್ತಕಗಳನ್ನು ಪ್ರಾಂಶುಪಾಲೆ ಪದ್ಮಾವತಿ ಅವರಿಗೆ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ ಹಸ್ತಾಂತರಿಸಿದರು.
ಪುತ್ತೂರು ವಕೀಲರ ಸಂಘ ಅಧ್ಯಕ್ಷ ಜಿ.ಜಗನ್ನಾಥ ರೈ, ಕಡಬ ತಾಲೂಕು ಜನಜಾಗೃತಿ ವೇದಿಕೆ ಸದಸ್ಯ ರಾಕೇಶ್ ರೈ ಕೆಡೆಂಜಿ, ಸವಣೂರು ಸರ್ಕಾರಿ ಪಪೂ ಕಾಲೇಜಿನ ಕಾರ್ಯಾಧ್ಯಕ್ಷ ಗಿರಿಶಂಕರ ಸುಲಾಯ, ಸವಣೂರು ಯುವಕ ಮಂಡಲ ಅಧ್ಯಕ್ಷ ಚೇತನ್ ಕುಮಾರ್ ಉಪಸ್ಥಿತರಿದ್ದರು.
ಸವಣೂರು ಪ್ರೌಢ ಶಾಲಾ ವಿಭಾಗದ ಮುಖ್ಯಶಿಕ್ಷಕಿ ಶ್ರೀಲತಾ ಸ್ವಾಗತಿಸಿದರು. ಸವಣೂರು ಪ್ರೌಢಶಾಲೆ ಶಿಕ್ಷಕ ಕಿಶನ್ ಬಿ.ವಿ. ನಿರೂಪಿಸಿದರು. ಧರ್ಮಸ್ಥಳ ಯೋಜನೆ ಸವಣೂರು ವಲಯದ ಮೇಲ್ವಿಚಾರಕಿ ಹೇಮಲತಾ ವಂದಿಸಿದರು.