ಮೂಡುಬಿದಿರೆ ಪುರಸಭೆ ವತಿಯಿಂದ ನಡೆದ ನಾರಿಯಿಂದ ಸ್ವಚ್ಛತೆಗೆ ಮುನ್ನುಡಿ ಅಭಿಯಾನ, ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಾಧಕಿಯರನ್ನು ಸನ್ಮಾನಿಸಲಾಯಿತು. ಪುರಸಭೆ ಮುಖ್ಯಾಧಿಕಾರಿ ಇಂದು ಎಂ., ಆಳ್ವಾಸ್ ವೈದ್ಯಕೀಯ ಕಾಲೇಜು ಕಮ್ಯೂನಿಟಿ ಮೆಡಿಸಿನ್ ವಿಭಾಗ ಮುಖ್ಯಸ್ಥೆ ಡಾ.ಚೇತನಾ ಕೋಡ್ಲಿ ಇತರರಿದ್ದರು. 
ಉಡುಪಿ

ನಾರಿಯಿಂದ ಸ್ವಚ್ಛತೆಗೆ ಮುನ್ನುಡಿ ಅಭಿಯಾನ

ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ
ಸ್ವಚ್ಛ ಭಾರತ ಮಿಷನ್ ಹಾಗೂ ನಗರಾಭಿವೃದ್ಧಿ ಇಲಾಖೆಯಡಿಯಲ್ಲಿ ಮೂಡುಬಿದಿರೆ ಪುರಸಭೆ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ನಾರಿಯಿಂದ ಸ್ವಚ್ಛತೆಗೆ ಮುನ್ನುಡಿ ಅಭಿಯಾನ ಕಾರ್ಯಕ್ರಮ ಶುಕ್ರವಾರ ಸಮಾಜ ಮಂದಿರ ಸಭಾಭವನದಲ್ಲಿ ಆಯೋಜಿಸಲಾಯಿತು.
ಮಹಿಳಾ ಪೌರಕಾರ್ಮಿಕರು(ಸಫಾಯಿ ಮಿತ್ರರು), ಪುರಸಭೆ ಅಧಿಕಾರಿಗಳು, ಕಮ್ಯುನಿಟಿ ಮೊಬಿಲೈಸರ್, ಅಮೃತ ಮಿತ್ರ ಯೋಜನೆಯ ಸ್ವಸಹಾಯ ಗುಂಪಿನ ಮಹಿಳೆಯರಿಗಾಗಿ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮ, ಕ್ರೀಡಾ ಚಟುವಟಿಕೆ ಹಮ್ಮಿಕೊಳ್ಳಲಾಯಿತು.
ಪುರಸಭೆ ಮುಖ್ಯಾಧಿಕಾರಿ ಇಂದು ಎಂ. ಅಧ್ಯಕ್ಷತೆ ವಹಿಸಿದ್ದರು. ಸ್ವಚ್ಛ ಸರ್ವೇಕ್ಷಣೆ 2025-26ರಲ್ಲಿ ನಾಗರಿಕ ಅಭಿಪ್ರಾಯದ ಮಹತ್ವದ ಕುರಿತು ಪರಿಸರ ಅಭಿಯಂತರ ಶಿಲ್ಪಾ ಎಸ್. ಜಾಗೃತಿ ಮೂಡಿಸಿದರು. ಕಚೇರಿ ವ್ಯವಸ್ಥಾಪಕಿ ಯಶಸ್ವಿನಿ ಡಿಜಿಟಲ್ ಸಾಕ್ಷರತೆ ಕುರಿತು ಅರಿವು ಮೂಡಿಸಿದರು. ಹಿರಿಯ ಆರೋಗ್ಯ ನಿರೀಕ್ಷಕಿ ಶಶಿರೇಖಾ ಪೌರಕಾರ್ಮಿಕರ ಕೆಲಸದ ಸ್ಥಳದಲ್ಲಿ ಸುರಕ್ಷತೆ ಕುರಿತು ತರಬೇತಿ ನೀಡಿದರು.
ಸಮುದಾಯ ಸಂಘಟಕ ಪ್ರಸನ್ನ ಕುಮಾರ್ ಹಣಕಾಸು ಸಾಕ್ಷರತೆ ಮತ್ತು ಕೇಂದ್ರ-ರಾಜ್ಯ ಸರ್ಕಾರಗಳ ವಿವಿಧ ಕಲ್ಯಾಣ ಯೋಜನೆಗಳ ಕುರಿತು ಮಾಹಿತಿ ನೀಡಿದರು. 12 ಮಂದಿ ಮಹಿಳಾ ಸಫಾಯಿ ಮಿತ್ರರು, 12 ಮಂದಿ ಅಮೃತ ಮಿತ್ರ 2.0 ಪಾರ್ಕ್ ನಿರ್ವಾಹಕರನ್ನು ಸನ್ಮಾನಿಸಲಾಯಿತು.
ಆಳ್ವಾಸ್ ವೈದ್ಯಕೀಯ ಕಾಲೇಜು ಕಮ್ಯೂನಿಟಿ ಮೆಡಿಸಿನ್ ವಿಭಾಗ ಮುಖ್ಯಸ್ಥೆ ಡಾ.ಚೇತನಾ ಕೋಡ್ಲಿ ಮಾತನಾಡಿದರು. ಕಂದಾಯ ಅಧಿಕಾರಿ ಜ್ಯೋತಿ ಎಚ್. ಉಪಸ್ಥಿತರಿದ್ದರು. ಕಮ್ಯುನಿಟಿ ಮೊಬಿಲೈಸರ್‌ಗಳಾದ ಆಶಾ, ಅಮಿತಾ, ಚಂದ್ರಿಕಾ, ಸಮುದಾಯ ಸಂಪನ್ಮೂಲ ವ್ಯಕ್ತಿಗಳಾದ ಪೂರ್ಣಿಮಾ, ಫೌಝಿಯ ಅತಿಥಿಗಳನ್ನು ಗೌರವಿಸಿದರು. ಕಮ್ಯೂನಿಟಿ ಮೊಬಿಲೈಸರ್ ಆಶಾ ನಿರೂಪಿಸಿದರು. ಪ್ರಥಮ ದರ್ಜೆ ಸಹಾಯಕಿ ಮೀನಾಕ್ಷಿ ವಂದಿಸಿದರು. ಕಂದಾಯ ಅಧಿಕಾರಿ ಜ್ಯೋತಿ ಎಚ್. ನೇತೃತ್ವದಲ್ಲಿ ವಿವಿಧ ಕ್ರೀಡಾ ಚಟುವಟಿಕೆ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಶೂನ್ಯ ತ್ಯಾಜ್ಯ ಕಾರ್ಯಕ್ರಮವಾಗಿ ನಡೆಸಲಾಯಿತು.