ಪತ್ರಿಕಾ ದಿನ ಕಾರ್ಯಕ್ರಮದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಮಾತನಾಡಿದರು. ನಿಟ್ಟೆ ವಿಶ್ವವಿದ್ಯಾಲಯದ ಕೆ.ಆರ್.ಶೆಟ್ಟಿ ತುಳು ಅಧ್ಯಯನ ಕೇಂದ್ರ ಮುಖ್ಯಸ್ಥೆ ಡಾ.ಸಾಯಿ ಗೀತಾ ಹೆಗ್ಡೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಳ್ಳಾಲ ಘಟಕ ಅಧ್ಯಕ್ಷ ಶಶಿಧರ್ ಪೊಯ್ಯತ್ತಬೈಲ್ ಮತ್ತಿತರರಿದ್ದರು.  
ಉಡುಪಿ

ಮಾಧ್ಯಮ ಕ್ಷೇತ್ರಕ್ಕೆ ಕ್ಲಿಷ್ಟಕರ ಸವಾಲು

ಇಂದಿರಾ ಎನ್ ಕೆ
ಉಳ್ಳಾಲ: ಪ್ರಸ್ತುತ ದಿನಗಳಲ್ಲಿ ಮಾಧ್ಯಮ ಕ್ಷೇತ್ರ ಅತ್ಯಂತ ಕ್ಲಿಷ್ಟಕರ ಸವಾಲು ಎದುರಿಸುತ್ತಿದ್ದು, ಬದಲಾಗುತ್ತಿರುವ ಪರಿಸ್ಥಿತಿಗಳಿಗೆ ಹೊಂದಿಕೊಂಡು ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಹೇಳಿದರು.
ನಿಟ್ಟೆ ಇನ್‌ಸ್ಟಿಟ್ಯೂಟ್ ಆ್ ಕಮ್ಯುನಿಕೇಷನ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಳ್ಳಾಲ ತಾಲೂಕು ಘಟಕ ಆಶ್ರಯದಲ್ಲಿ ಮಂಗಳವಾರ ಪತ್ರಿಕಾ ದಿನಾಚರಣೆ-2026 ಉದ್ಘಾಟಿಸಿ ಮಾತನಾಡಿದರು.
ನಿಟ್ಟೆ ವಿಶ್ವವಿದ್ಯಾಲಯದ ಕೆ.ಆರ್.ಶೆಟ್ಟಿ ತುಳು ಅಧ್ಯಯನ ಕೇಂದ್ರ ಮುಖ್ಯಸ್ಥೆ ಡಾ.ಸಾಯಿ ಗೀತಾ ಹೆಗ್ಡೆ ಮಾತನಾಡಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಳ್ಳಾಲ ಘಟಕ ಅಧ್ಯಕ್ಷ ಶಶಿಧರ್ ಪೊಯ್ಯತ್ತಬೈಲ್, ನಿಕಟಪೂರ್ವ ಅಧ್ಯಕ್ಷ ವಸಂತ್ ಎನ್.ಕೊಣಾಜೆ, ನಿಟ್ಟೆ ಇನ್‌ಸ್ಟಿಟ್ಯೂಷನ್ಸ್ ಆ್ ಕಮ್ಯುನಿಕೇಷನ್ ಮುಖ್ಯಸ್ಥ ಮೌಲ್ಯ ಬಾಲಾಡಿ ಉಪಸ್ಥಿತರಿದ್ದರು. ಪತ್ರಕರ್ತರ ಸಂಘ ಪ್ರಧಾನ ಕಾರ್ಯದರ್ಶಿ ದಿನೇಶ್ ನಾಯಕ್ ಸ್ವಾಗತಿಸಿದರು. ಕಾರ್ಯದರ್ಶಿ ಡಾ.ಸತೀಶ್ ಕೊಣಾಜೆ ವಂದಿಸಿದರು. ಉಪಾಧ್ಯಕ್ಷ ಸತೀಶ್ ಕುಮಾರ್ ಪುಂಡಿಕಾಯಿ ನಿರೂಪಿಸಿದರು.