ತೆಂಕನಿಡಿಯೂರು ಸರ್ಕಾರಿ ಕಾಲೇಜಿನಲ್ಲಿ ಸಾಧಕ ಮಹಿಳೆಯರನ್ನು ಸನ್ಮಾನಿಸಲಾಯಿತು. ನಿತ್ಯಾನಂದ ವಿ. ಗಾಂವಕರ್, ಡಾ. ಆಶಾ ಸಿ. ಇಂಗಳಗಿ, ರಾಕೇಶ್, ಪ್ರಶಾಂತ್ ನೀಲಾವರ, ಮರ್ವಿನ್ ಡಿಸೋಜ, ಬಿಂದು ಟಿ., ಕೃಷ್ಣ ಸಾಸ್ತಾನ, ಸುಷ್ಮಾ ಟಿ. ಇದ್ದರು.
* ಪ್ರಾಂಶುಪಾಲ ನಿತ್ಯಾನಂದ ವಿ. ಗಾಂವಕರ್ ಆಶಯ
* ತೆಂಕನಿಡಿಯೂರು ಕಾಲೇಜಿನಲ್ಲಿ ಮಹಿಳಾ ದಿನಾಚರಣೆ
ಉಡುಪಿ: ಎಲ್ಲ ಕ್ಷೇತ್ರಗಳಲ್ಲೂ ಇಂದು ಮಹಿಳೆ ಸಾಧನೆ ಮಾಡುತ್ತಿದ್ದಾಳೆ. ಸಾಧಕಿಯರ ಸಾಧನೆ ವಿದ್ಯಾರ್ಥಿನಿಯರಿಗೆ ಪ್ರೇರಣೆಯಾಗಿ ಶೈಕ್ಷಣಿಕ ಸಾಧನೆಗೆ ಮುನ್ನುಡಿಯಾಗಲಿ. ಗ್ರಾಮೀಣ ಪ್ರದೇಶದ ಮಹಿಳೆಯರು ಸ್ವಾವಲಂಬಿಗಳಾಗಿ ತಮ್ಮ ಬದುಕು ಕಟ್ಟಿಕೊಂಡಿದ್ದಲ್ಲದೆ, ಇತರರಿಗೂ ಉದ್ಯೋಗ ನೀಡುತ್ತಿರುವುದು ಮಹಿಳಾ ಸಬಲೀಕರಣಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ತೆಂಕನಿಡಿಯೂರು ಕಾಲೇಜಿನ ಪ್ರಾಂಶುಪಾಲ ನಿತ್ಯಾನಂದ ವಿ. ಗಾಂವಕರ್ ಅನಿಸಿಕೆ ವ್ಯಕ್ತಪಡಿಸಿದರು.
ಉಡುಪಿ ತಾಲೂಕಿನ ತೆಂಕನಿಡಿಯೂರಿನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಭಾಂಗಣದಲ್ಲಿ ಐಕ್ಯುಎಸಿ, ಮಹಿಳಾ ವೇದಿಕೆ, ರಾಷ್ಟ್ರೀಯ ಸೇವಾ ಯೋಜನೆ, ರೋವರ್ಸ್ ರೇಂರ್ಜಸ್ ಘಟಕ, ಯುವ ರೆಡ್ ಕ್ರಾಸ್ ಘಟಕ, ಕ್ರೀಡಾ ಮತ್ತು ಸಾಂಸ್ಕೃತಿಕ ಸಮಿತಿ ಹಾಗೂ ಗೊರೆಟ್ಟಿ ಆಸ್ಪತ್ರೆ ಕಲ್ಯಾಣಪುರ ಸಹಕಾರದಲ್ಲಿ ಸೋಮವಾರ (ಮಾ.9) ಆಯೋಜಿಸಿದ್ದ ವಿಶ್ವ ಮಹಿಳಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಾಧಕಿಯರಿಗೆ ಸನ್ಮಾನ
ಅಂತಾರಾಷ್ಟ್ರೀಯ ಕ್ರೀಡಾಪಟು ಅರುಣಕಲಾ ಎಸ್. ರಾವ್, ಸಂಜೀವಿನಿ ಒಕ್ಕೂಟದ ಸಮುದಾಯ ಸಂಪನ್ಮೂಲ ವ್ಯಕ್ತಿ ಜಯಶ್ರೀ, ಸ್ತ್ರೀರೋಗ ತಜ್ಞೆ ಡಾ. ರಾಜಲಕ್ಷ್ಮೀ ಅವರನ್ನು ಸಮ್ಮಾನಿಸಿ ಗೌರವಿಸಲಾಯಿತು. ಕಾಲೇಜಿನ ವಿದ್ಯಾರ್ಥಿನಿಯರಿಗೆ ಡಾ. ರಾಜಲಕ್ಷ್ಮೀ ಅವರು ಮಹಿಳಾ ಆರೋಗ್ಯ ಮತ್ತು ನೈರ್ಮಲ್ಯದ ಕುರಿತು ಮಾಹಿತಿ ಹಾಗೂ ಸಂವಾದ ನಡೆಸಿದರು.
ಮಹಿಳಾ ವೇದಿಕೆಯ ಸಂಚಾಲಕಿ ಡಾ. ಆಶಾ ಸಿ. ಇಂಗಳಗಿ, ಗೊರೆಟ್ಟಿ ಆಸ್ಪತ್ರೆಯ ಸಮಾಜ ಕಾರ್ಯಕರ್ತ ರಾಕೇಶ್, ಯುವ ರೆಡ್ ಕ್ರಾಸ್ನ ಸಂಚಾಲಕ ಪ್ರಶಾಂತ ನೀಲಾವರ, ರೋವರ್ಸ್-ರೇಂರ್ಜಸ್ ಸಂಚಾಲಕ ಮರ್ವಿನ್ ವಿಕ್ಟರ್ ಡಿಸೋಜ, ದೈಹಿಕ ಶಿಕ್ಷಣ ನಿರ್ದೇಶಕ ಡಾ. ರೋಶನ್ ಶೆಟ್ಟಿ, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಬಿಂದು ಟಿ., ಸಾಂಸತಿಕ ಸಮಿತಿಯ ಸಂಚಾಲಕ ಕೃಷ್ಣ ಸಾಸ್ತಾನ, ರಾಷ್ಟ್ರೀಯ ಸೇವಾ ಯೋಜನೆಯ ಸಂಚಾಲಕಿ ಸುಷ್ಮಾ ಟಿ., ಬೋಧಕ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ಅಂಬಿಕಾ ಮತ್ತು ಸಂಗಡಿಗರು ಪ್ರಾರ್ಥಿಸಿದರು. ಪ್ರಥಮ ಬಿಸಿಎ ವಿದ್ಯಾರ್ಥಿನಿ ರಶ್ಮಿತಾ ಸ್ವಾಗತಿಸಿದರು. ದ್ವಿತೀಯ ಬಿಕಾಂ ವಿದ್ಯಾರ್ಥಿನಿ ದೀಕ್ಷಾ ವಂದಿಸಿದರು. ಪ್ರಥಮ ಎಂಎಸ್ಡಬ್ಲ್ಯು ವಿದ್ಯಾರ್ಥಿನಿ ಸಿಯಾನಾ ಕಾರ್ಯಕ್ರಮ ನಿರೂಪಿಸಿದರು.