ಎಸ್‌ಡಿಎಂ ಪದವಿ ಪೂರ್ವ ಕಾಲೇಜಿನಲ್ಲಿ ವಿವಿಧ ವಿಭಾಗಗಳ ಭಿತ್ತಿಪತ್ರಿಕೆ ಅನಾವರಣ ಕಾರ್ಯಕ್ರಮ ನಡೆಯಿತು. ಡಾ.ಭಾಸ್ಕರ್ ಹೆಗ್ಡೆ, ಪ್ರಮೋದ್ ಕುಮಾರ್ ಬಿ., ಡಾ.ರಾಜೇಶ್ ಬಿ., ವೈದೇಹಿ ಎಸ್., ಸುಭಾಷ್ ರಾವ್ ಮೊದಲಾದವರು ಇದ್ದರು.  
ಉಡುಪಿ

ಪ್ರತಿಭೆ ಅನಾವರಣಕ್ಕೆ ಉತ್ತಮ ವೇದಿಕೆ

ಬೆಳ್ತಂಗಡಿ: ಭಿತ್ತಿಪತ್ರಿಕೆ ವಿದ್ಯಾರ್ಥಿಗಳ ಜ್ಞಾನ ಮತ್ತು ಕೌಶಲಗಳ ಅನಾವರಣಕ್ಕಿರುವ ವೇದಿಕೆ. ಸ್ಪರ್ಧಾತ್ಮಕ ಯುಗದ ಸಾಗರದಲ್ಲಿ ಈಜಿ ಯಶಸ್ಸನ್ನು ತಲುಪಲು ಇಂದಿನಿಂದಲೇ ಪ್ರಯತ್ನಶೀಲರಾಗಬೇಕು. ಇಂಥ ಶೈಕ್ಷಣಿಕ ಕಾರ್ಯ ಚಟುವಟಿಕೆಗಳಲ್ಲಿ ಶ್ರದ್ಧೆ ಮತ್ತು ಕುತೂಹಲದಿಂದ ಸಕ್ರಿಯವಾಗಿ ತೊಡಗಿಸಿಕೊಂಡಾಗ ನಾವು ಬಹು ಎತ್ತರಕ್ಕೆ ಬೆಳೆಯಲು ಸಾಧ್ಯ ಎಂದು ಉಜಿರೆ ಎಸ್‌ಡಿಎಂ ಸ್ವಾಯತ್ತ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ನಿವೃತ್ತ ಮುಖ್ಯಸ್ಥ ಡಾ.ಭಾಸ್ಕರ್ ಹೆಗ್ಡೆ ಹೇಳಿದರು.
ಎಸ್‌ಡಿಎಂ ಪದವಿ ಪೂರ್ವ ಕಾಲೇಜಿನಲ್ಲಿ ವಿವಿಧ ವಿಭಾಗಗಳ ಭಿತ್ತಿಪತ್ರಿಕೆ ಅನಾವರಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ವಿದ್ಯಾರ್ಥಿಗಳು ಬಹುಮುಖ ಪ್ರತಿಭೆಯ ಜತೆಗೆ ಆತ್ಮವಿಶ್ವಾಸ ಬೆಳೆಸಿಕೊಲ್ಳಬೇಕು. ಸಾರ್ವಜನಿಕ ಸಂಪರ್ಕ ಬೆಳೆಸಿಕೊಳ್ಳಲು ಸಂವಹನ ಕಲೆ ಅಗತ್ಯ ಎಂದರು.
ಪ್ರಾಂಶುಪಾಲ ಪ್ರಮೋದ್ ಕುಮಾರ್ ಬಿ. ಅಧ್ಯಕ್ಷತೆ ವಹಿಸಿದ್ದರು. 15ಕ್ಕೂ ಹೆಚ್ಚು ವಿವಿಧ ವಿಭಾಗಗಳ ವಿದ್ಯಾರ್ಥಿಗಳು ಕ್ರಿಯಾತ್ಮಕವಾಗಿ ರಚಿಸಿದ ಭಿತ್ತಿಪತ್ರಿಕೆ ಅನಾವರಣ ಮಾಡಲಾಯಿತು. ಉಪ ಪ್ರಾಂಶುಪಾಲ ಡಾ.ರಾಜೇಶ್ ಬಿ., ಕಾರ್ಯಕಾರಿ ಸಮಿತಿ ಮುಖ್ಯಸ್ಥೆ ವೈದೇಹಿ ಎಸ್., ಉಪನ್ಯಾಸಕರಾದ ಸುಭಾಷ್ ರಾವ್, ಮನೋಹರ್ ಶೆಟ್ಟಿ, ಅಶ್ವಿನಿ ಎಚ್.ಆರ್., ಅಂಬಿಕಾ ಕೆ. ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಚಾರಿತ್ರಾ ಜೈನ್ ನಿರೂಪಿಸಿದರು. ಭಾಗ್ಯಲಕ್ಷ್ಮೀ ಸ್ವಾಗತಿಸಿದರು. ಸ್ಮತಿ ವಂದಿಸಿದರು.

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗಾಗಿ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಎಲ್ಲ ಶಾಲಾ ಕಾಲೇಜುಗಳಲ್ಲಿ ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಿಗೂ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುತ್ತಿದೆ. ಪ್ರತಿ ಶೈಕ್ಷಣಿಕ ವಷರ್ದ ಆರಂಭದಲ್ಲಿ ವಿದ್ಯಾರ್ಥಿಗಳ ಸೃಜನಶೀಲತೆಗೆ ಪೂರಕವಾಗುವ ನಾನಾ ಕಾರ್ಯಚಟುವಟಿಕೆಗಳು ಕಾಲೇಜಿನಲ್ಲಿ ನಡೆಯುತ್ತವೆ.

— ಪ್ರಮೋದ್ ಕುಮಾರ್ ಬಿ., ಪ್ರಾಂಶುಪಾಲ