ಉಡುಪಿಯಲ್ಲಿ ಆಯೋಜಿಸಿದ್ದ ಕನಕದಾಸ ಜಯಂತಿಯನ್ನು ಯಶ್​ಪಾಲ್​ ಸುವರ್ಣ ಉದ್ಘಾಟಿಸಿದರು. ಅಬೀದ್​ ಗದ್ಯಾಳ, ಎಂ.ಎ. ಗೂರ್​, ದಿನಕರ ಹೇರೂರು, ಪೂರ್ಣಿಮಾ, ಪ್ರಜ್ಞಾ ಮಾರ್ಪಳ್ಳಿ, ಹನುಮಂತ ಡೊಳ್ಳಿನ, ಬಸವರಾಜ ಕುರುಬರ, ವೀರೇಶ ಉಪಸ್ಥಿತರಿದ್ದರು. 
ಉಡುಪಿ

ದೇವರ ಭಕ್ತಿ, ಪ್ರಜ್ಞೆ ಮೂಡಿಸಿದ ಶ್ರೇಷ್ಠ ಸಂತ

* ಉಡುಪಿ ಶಾಸಕ ಯಶ್​ಪಾಲ್​ ಸುವರ್ಣ ಶ್ಲಾಘನೆ

* ಕನಕದಾಸ ಜಯಂತಿ ಉದ್ಘಾಟನೆ

ಉಡುಪಿ: ಕನಕದಾಸರು ನಾಡು ಕಂಡ ಅಪ್ರತಿಮ ದಾಸರಾಗಿದ್ದು ಉಡುಪಿಯೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದಾರೆ. ಕನಕದಾಸರ ಭಕ್ತಿಗೆ ಮೆಚ್ಚಿ ಶ್ರೀಕೃಷ್ಣ ದರ್ಶನ ನೀಡಿರುವುದು ಹಾಗೂ ಕನಕನ ಕಿಂಡಿ ಇಂದಿಗೂ ಇತಿಹಾಸ ಪುಟದಲ್ಲಿ ಶಾಶ್ವತವಾಗಿದೆ. ಸಮಾಜದಲ್ಲಿ ಸಮಾನತೆ, ಜನರಿಗೆ ದೇವರ ಭಕ್ತಿ ಹಾಗೂ ಪ್ರಜ್ಞೆ ಮೂಡಿಸಿದ ಶ್ರೇಷ್ಠ ಸಂತರಾಗಿದ್ದಾರೆ ಎಂದು ಶಾಸಕ ಯಶ್​ಪಾಲ್​ ಸುವರ್ಣ ತಿಳಿಸಿದರು.

ಉಡುಪಿ ನಗರದಲ್ಲಿರುವ ಗೋವಿಂದ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಶುಕ್ರವಾರ (ನ.27) ಆಯೋಜಿಸಿದ್ದ ಕನಕದಾಸ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ದಾಸ ಸಾಹಿತ್ಯಕ್ಕೆ ಕನಕದಾಸರ ಕೊಡುಗೆ ಅಪಾರ ಎಂದರು.

ಶಾಸಕ ಯಶ್​ಪಾಲ್​ ಸುವರ್ಣ ಮಾತನಾಡಿದರು.

ಜೀವನಾದರ್ಶದ ಕೊಡುಗೆ

ಅಪರ ಜಿಲ್ಲಾಧಿಕಾರಿ ಅಬೀದ್​ ಗದ್ಯಾಳ ಮಾತನಾಡಿ, ಕನಕದಾಸರು ಎಲ್ಲರಿಗೂ ಬದುಕು ರೂಪಿಸಿಕೊಳ್ಳಲು ಬೇಕಾದ ಆದರ್ಶಗಳನ್ನು ತಮ್ಮ ಕೀರ್ತನೆಗಳ ಮೂಲಕವೇ ಅರ್ಥಬದ್ಧವಾಗಿ ತಿಳಿಸಿಕೊಟ್ಟಿದ್ದಾರೆ. ಜಾತಿ, ಮತ ಮತ್ತು ಸಮಾಜದಲ್ಲಿರುವ ಪಿಡುಗಳನ್ನು ದಾಸ ಸಾಹಿತ್ಯದ ಮೂಲಕ ಟೀಕಿಸಿ ಸಮಾನತೆಗೆ ಪ್ರಯತ್ನಿಸಿದರು. ಭಗವಂತ ಶ್ರೀಕೃಷ್ಣನನ್ನೇ ಒಲಿಸಿಕೊಂಡ ಶ್ರೇಷ್ಠ ಭಕ್ತನೂ ಆಗಿದ್ದರು ಎಂದರು.

ಪೂರ್ಣಪ್ರಜ್ಞ ಸಂಧ್ಯಾ ಕಾಲೇಜ್​ನ ಉಪನ್ಯಾಸಕಿ ಪ್ರಜ್ಞಾ ಮಾರ್ಪಳ್ಳಿ ಕನಕದಾಸರ ಕುರಿತು ವಿಶೇಷ ಉಪನ್ಯಾಸ ನೀಡಿದರು.

ನಗರಾಭಿವೃದ್ಧಿಪ್ರಾಧಿಕಾರದ ಅಧ್ಯಕ್ಷದಿನಕರ ಹೇರೂರು, ಉಡುಪಿ ಜಿಲ್ಲಾ ಕನಕದಾಸ ಸಮಾಜ ಸೇವಾ ಸಂಘದ ಅಧ್ಯಕ್ಷ ಹನುಮಂತ ಡೊಳ್ಳಿನ, ಕರ್ನಾಟಕ ಪ್ರದೇಶ ಕುರುಬರ ಸಂಘ ಬೆಂಗಳೂರಿನ ಕಾರ್ಯದರ್ಶಿ ಬಸವರಾಜ ಕುರುಬರ, ಉಡುಪಿ ಜಿಲ್ಲಾ ಹಾಲುಮತ ಮಹಾಸಭಾದ ಅಧ್ಯಕ್ಷ ವೀರೇಶ ಉಪಸ್ಥಿತರಿದ್ದರು.

ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರು. ಪ್ರದೀಪ ಡಿ.ಎಂ. ಹಾವಂಜೆ ಕಾರ್ಯಕ್ರಮ ನಿರ್ವಹಿಸಿದರು.

ಬದುಕು ಉತ್ತಮವಾಗಲು ಮನದಲ್ಲಿರುವ ದ್ವೇಷ, ಅಸೂಯೆ ತ್ಯಜಿಸಿ ಸುಂದರ ಸಮಾಜ ನಿರ್ಮಾಣಕ್ಕೆ ಶ್ರಮಿಸಬೇಕು.ಆ ನಿಟ್ಟಿನಲ್ಲಿ ಕನಕದಾಸರ ಹಾಗೂ ಅನೇಕರ ದಾಸ ಸಾಹಿತ್ಯದ ಸಂದೇಶವನ್ನು ನಾವೆಲ್ಲರೂ ಪಾಲಿಸಬೇಕು.
ಎಂ.ಎ. ಗಫೂರ್​. ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ.