ಆಲಡೆ ಕ್ಷೇತ್ರ ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನದ ಜಾತ್ರೋತ್ಸವ ಸಂದರ್ಭ ಅನ್ನದಾನಕ್ಕೆ ಸಹಕಾರ ನೀಡಿದವರನ್ನು ಗೌರವಿಸಲಾಯಿತು. ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಕೆ.ಎಂ. ನಾಗೇಶ್ ಕುಮಾರ್ ಗೌಡ ನಿಡ್ಲೆ ಇತರರು ಇದ್ದರು. 
ಉಡುಪಿ

ವಿಶೇಷ ಶಕ್ತಿ ಹೊಂದಿರುವ ಸಾನ್ನಿಧ್ಯ ಲೋಕನಾಡು

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ
ತುಳುನಾಡಿನ ನಡ್ವಾಲ್‌ನ ಮಣ್ಣಿನಲ್ಲಿರುವ ಲೋಕನಾಡು ವಿಶೇಷ ಶಕ್ತಿ ಹೊಂದಿರುವ ಸಾನಿಧ್ಯ. ಅಹಂಕಾರ, ಮಮಕಾರ, ದುರ್ನಡತೆಗಳಿಗೆ ಉತ್ತರ ಕೊಡುವ ಸತ್ಯನಪುರದ ತಾಯಿ ಸಿರಿ ಎಂದು ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು.
ಆಲಡೆ ಕ್ಷೇತ್ರ ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನದ ಜಾತ್ರೋತ್ಸವದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.
ಬೆಳ್ತಂಗಡಿಯ ಬೆಸ್ಟ್ ಫೌಂಡೇಷನ್ ಅಧ್ಯಕ್ಷ ರಕ್ಷಿತ್ ಶಿವರಾಂ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಅತಿಥಿಗಳಾಗಿದ್ದ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ, ಧರ್ಮಸ್ಥಳ ಎಸ್‌ಕೆಡಿಆರ್‌ಡಿಪಿ ಮುಖ್ಯಕಾಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್., ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ, ಉಜಿರೆ ಬೆನಕ ಹೆಲ್ತ್ ಸೆಂಟರ್‌ನ ಆಡಳಿತ ನಿರ್ದೇಶಕ ಡಾ.ಗೋಪಾಲಕೃಷ್ಣ ಭಟ್, ಗೆಜ್ಜೆಗಿರಿ ಕ್ಷೇತ್ರದ ಅಧ್ಯಕ್ಷ ಪಿತಾಂಬರ ಹೆರಾಜೆ, ಬೆಳ್ತಂಗಡಿ ಗುರುನಾರಾಯಣ ಸಂಘದ ಅಧ್ಯಕ್ಷ ಜಯ ವಿಕ್ರಂ ಕಲ್ಲಾಪು, ಉದ್ಯಮಿಗಳಾದ ಪ್ರವೀಣ್ ಫನಾರ್ಂಡಿಸ್, ಅರುಣ್ ಕುಮಾರ್ ಮಾತನಾಡಿದರು.
ಜಾತ್ರೋತ್ಸವ ಸಮಿತಿ ಅಧ್ಯಕ್ಷ ಕೆ.ಎಂ. ನಾಗೇಶ್ ಕುಮಾರ್ ಗೌಡ ನಿಡ್ಲೆ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗುರುರಾಜ್ ಗುರಿಪಳ್ಳ, ಜಾತ್ರೋತ್ಸವ ಸಮಿತಿ ಪ್ರಧಾನ ಸಂಚಾಲಕ ಪಾಂಡುರಂಗ ಮರಾಠೆ, ಅರ್ಚಕ ಎಚ್.ಎಸ್. ಮಾಧವ ಶರ್ಮ, ಜಾತ್ರೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಸದಾನಂದ ಪೂಜಾರಿ ಕೊಡೆಕ್ಕಲ್, ವ್ಯವಸ್ಥಾಪನ ಸಮಿತಿ ಸದಸ್ಯರಾದ ಯಶೋಧರ ಗೌಡ ಕೊಡ್ಡೋಳು, ಪ್ರವೀಣ್ ವಿ.ಜಿ.,ಪ್ರಸಾದ್ ಕುಮಾರ್ ಏಣೀರು, ನಾಣ್ಯಪ್ಪ ಪೂಜಾರಿ ಗೋಳಿದೊಟ್ಟು, ಕೇಶವತಿ ಪಾಲೆದಡಿ, ಪ್ರೇಮಾ ಉಪಸ್ಥಿತರಿದ್ದರು.

ಐದು ದಿನಗಳ ಜಾತ್ರೆ ಸಂಪನ್ನ

ಮಾ.31ರಂದು ಆರಂಭಗೊಂಡ ತುಳುನಾಡು ಸತ್ಯನಾಪುರ ‘ಸತ್ಯದ ಸಿರಿಗಳ’ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ, ನಡ್ವಾಲ್ ಸಿರಿಜಾತ್ರಾ ಮಹೋತ್ಸವ, ನಾಗದರ್ಶನ, ಆಶ್ಲೇಷಾ ಬಲಿ, ದೈವಗಳ ನೇಮೋತ್ಸವ ಧಾರ್ಮಿಕ ವೈದಿಕ ವಿಧಿ-ವಿಧಾನಗಳೊಂದಿಗೆ ಶನಿವಾರ ಸಂಪನ್ನಗೊಂಡಿತು.