ಪೂರ್ವಭಾವಿ ಸಭೆಯಲ್ಲಿ ಕೃಷಿಕ ಸಮಾಜದ ಅಧ್ಯಕ್ಷ ದೇವದಾಸ್ ಭಂಡಾರಿ ಮಾತನಾಡಿದರು. ಅಮ್ಮೆಂಬಳ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಟಿ.ಜಿ.ರಾಜಾರಾಮ ಭಟ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಉತ್ಸವ ಸಮಿತಿಯ ಕೋಶಾಧಿಕಾರಿ ರಾಧಾಕೃಷ್ಣ ರೈ ಉಮಿಯ ಉಪಸ್ಥಿತರಿದ್ದರು. 
ಉಡುಪಿ

ಸರ್ವರ ಸಹಕಾರದಲ್ಲಿ ದೊಡ್ಡ ಮಟ್ಟದ ಉತ್ಸವ

ವಿಜಯವಾಣಿ ಸುದ್ದಿಜಾಲ ಉಳ್ಳಾಲ
ಕೃಷಿ, ಆಹಾರ ಮೇಳ ಹಾಗೂ ಸಾಂಸ್ಕೃತಿಕ ರಾರ್ಯಕ್ರಮಕ್ಕೆ ಹಲವು ಸಂಘ ಸಂಸ್ಥೆಗಳು ಸಹಕಾರ ನೀಡುತ್ತಿದ್ದು ದೊಡ್ಡಮಟ್ಟದ ಉತ್ಸವವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಸರ್ವರ ಸಹಕಾರ ಅಗತ್ಯ ಎಂದು ಮುಡಿಪು ಉತ್ಸವ ಸಮಿತಿಯ ಕೋಶಾಧಿಕಾರಿ ರಾಧಾಕೃಷ್ಣ ರೈ ಉಮಿಯ ಹೇಳಿದರು.
ಮುಡಿಪು ಉತ್ಸವ ಸಮಿತಿ ಆಶ್ರಯದಲ್ಲಿ ಏ.24ರಿಂದ 26ರವರೆಗೆ ಮುಡಿಪು ಶ್ರೀ ಕೃಷ್ಣ ಧ್ಯಾನ ಮಂದಿರ ಸಹಯೋಗದೊಂದಿಗೆ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ನಡೆಯಲಿರುವ ಕೃಷಿ, ಆಹಾರ ಮೇಳ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಪ್ರಯುಕ್ತ ಶನಿವಾರ ಮುಡಿಪುವಿನಲ್ಲಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಕಾರ್ಯಕ್ರಮ ಸಂಯೋಜಕ ಅಜಿತ್ ಪೂಜಾರಿ ವಿಚಾರ ಸಂಕಿರಣ ಬಗ್ಗೆ, ಸಾಂಸ್ಕೃತಿಕ ಉತ್ಸವ ಬಗ್ಗೆ ಚಂದ್ರಹಾಸ ಕಣಂತೂರು ಹಾಗೂ ಭರತ್ ರಾಜ್ ಸೊರಕೆ ಕೃಷಿ ಬಗ್ಗೆ ಮಾಹಿತಿ ನೀಡಿದರು.
ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಉತ್ಸವ ಸಮಿತಿ ಕೋಶಾಧಿಕಾರಿ ರಾಧಾಕೃಷ್ಣ ರೈ ಉಮಿಯ, ಉದ್ಯಮಿಗಳಾದ ರಮೇಶ್ ಶೇಣವ, ಇಬ್ರಾಹಿಂ ತಪ್ಷಿಯಾ ನಡುಪದವು, ಜಿಲ್ಲಾ ಸ್ವಚ್ಛತಾ ರಾಯಭಾರಿ ಶೀನ ಶೆಟ್ಟಿ, ಜನಶಿಕ್ಷಣ ಟ್ರಸ್ಟ್ ನಿರ್ದೇಶಕ ಕೃಷ್ಣ ಮೂಲ್ಯ, ಅಮ್ಮೆಂಬಳ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಜಯರಾಮ ಶೆಟ್ಟಿ ಕಂಬಳಪದವು, ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರ್, ಉತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಲೀಲ್ ಮೋಂಟುಗೋಳಿ, ಕೃಷಿಕ ಸಮಾಜದ ನಿರ್ದೇಶಕರಾದ ಶಂಕರ್ ಭಟ್ ದೋಸೆಮನೆ, ಜೋಸೆಫ್ ಕುಟಿನ್ಹ, ಕೈರಂಗಳ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಪ್ರಭಾವತಿ ಶೆಟ್ಟಿ, ಉಪಸ್ಥಿತರಿದ್ದರು.
ಬಂಟ್ವಾಳ ತಾ.ಪಂ. ಮಾಜಿ ಸದಸ್ಯ ಹೈದರ್ ಕೈರಂಗಳ ಸ್ವಾಗತಿಸಿದರು. ಕೃಷಿಕ ಸಮಾಜದ ಅಧ್ಯಕ್ಷ ದೇವದಾಸ್ ಭಂಡಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕೊಳಚೆ ನೀರು ಸಮಸ್ಯೆ ಚರ್ಚೆ

ಉತ್ಸವಕ್ಕೆ ತೆರಳುವ ಮುಖ್ಯರಸ್ತೆ ಮುಡಿಪು ಜಂಕ್ಷನ್ ದ್ವಾರದ ಬಳಿಯೇ ಕೊಳಚೆ ನೀರಿನ ಕೊಳ ನಿರ್ಮಾಣವಾಗಿರುವ ಬಗ್ಗೆ ಕೃಷಿಕ ಅಬ್ದುಲ್ ಖಾದರ್ ಮತ್ತು ಸಾಮಾಜಿಕ ಕಾರ್ಯಕರ್ತ ಅಬೂಬಕ್ಕರ್ ಜಲ್ಲಿ ಪ್ರಸ್ತಾಪಿಸಿದ್ದು ಚರ್ಚೆಗೆ ಗ್ರಾಸವಾಯಿತು. ಉತ್ಸವಕ್ಕೆ ಬರುವ ಜನರಿಗೆ ತೊಂದರೆ ಆಗದ ನಿಟ್ಟಿನಲ್ಲಿ ನೋಡಿಕೊಳ್ಳಲಾಗುವುದು ಎಂದು ಹೈದರ್ ಕೈರಂಗಳ ಭರವಸೆ ನೀಡಿದರು.