ಬಂಟ್ವಾಳ ತಾಲೂಕುಮಟ್ಟದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆಯಲ್ಲಿ ಶಾಸಕ ರಾಜೇಶ್ ನಾಕ್, ಬೂಡ ಅಧ್ಯಕ್ಷ ಬೇಬಿ ಕುಂದರ್, ಬಂಟ್ವಾಳ ತಹಸೀಲ್ದಾರ್ ಮಂಜುನಾಥ್ ಇತರರು ಉಪಸ್ಥಿತರಿದ್ದರು.  
ಉಡುಪಿ

ಸಂಘರ್ಷ ಇಲ್ಲದೆ ಸುಧಾರಣೆ ತಂದ ಮಹನೀಯ

ಇಂದಿರಾ ಎನ್ ಕೆ

ಬಂಟ್ವಾಳ: ಸಮಾಜದಲ್ಲಿ ಸಂಘರ್ಷಕ್ಕೆ ಅವಕಾಶ ನೀಡದೆ ಅಹಿಂಸೆಯ ಮಾರ್ಗದ ಮೂಲಕ ಪರಿವರ್ತನೆ ತಂದ ಸಮಾಜ ಸುಧಾರಕರಲ್ಲಿ ನಾರಾಯಣಗುರುಗಳು ಪ್ರಮುಖರು. ಅವರ ತತ್ವ, ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡು ಪಾಲಿಸಿದರೆ ಅದುವೇ ಗುರುಗಳಿಗೆ ನೀಡುವ ದೊಡ್ಡ ಗುರುದಕ್ಷಿಣೆ ಎಂದು ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿ ಹೇಳಿದರು.

ಬಂಟ್ವಾಳ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಂಟ್ವಾಳ ತಾಲೂಕು ಕಚೇರಿಯಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ತಾಲೂಕುಮಟ್ಟದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆಯಲ್ಲಿ ಮಾತನಾಡಿದರು.
ಬೂಡ ಅಧ್ಯಕ್ಷ ಬೇಬಿ ಕುಂದರ್ ಮಾತನಾಡಿ, ಬ್ರಹ್ಮಶ್ರೀ ನಾರಾಯಣಗುರು ಜಯಂತಿಯಂತಹ ಕಾರ್ಯಕ್ರಮಗಳು ಕೇವಲ ನಾಲ್ಕು ಗೋಡೆಗಳ ಮಧ್ಯೆ ನಡೆಯುವ ಕಾರ್ಯಕ್ರಮಗಳಾಗಬಾರದು. ಗುರುಗಳ ತತ್ವಸಂದೇಶಗಳನ್ನು ಜನರಿಗೆ ತಲುಪಿಸುವ ರೀತಿಯಲ್ಲಿ ನಡೆಯಬೇಕು ಎಂದರು.
ಬಂಟ್ವಾಳ ತಹಸೀಲ್ದಾರ್ ಮಂಜುನಾಥ್ ಮಾತನಾಡಿ, ಮಕ್ಕಳಿಗೆ ಗುರುಗಳ ತತ್ವ, ಆದರ್ಶ ಹಾಗೂ ಸಮಾಜ ಸುಧಾರಣೆಯ ಸಂದೇಶಗಳನ್ನು ತಿಳಿಸುವ ಕಾರ್ಯವಾಗಬೇಕು ಎಂದರು.
ತಾಲೂಕು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ಪೂಜಾರಿ, ಬಂಟ್ವಾಳ ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಕಾರ್ಯದರ್ಶಿ ಶ್ರೀನಿವಾಸ ಪೂಜಾರಿ, ಯುವವಾಹಿನಿ ಅಧ್ಯಕ್ಷ ಕಿರಣ್ ಪೂಜಾರಿ ಪೂಂಜರಕೋಡಿ, ಬಂಟ್ವಾಳ ತಾಲೂಕು ಬಿಲ್ಲವ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಉಪತಹಸೀಲ್ದಾರ್ ನವೀನ್ ಬೆಂಜನಪದವು ಸ್ವಾಗತಿಸಿದರು. ತಾಲೂಕು ಕಚೇರಿ ನೌಕರ ಜನಾರ್ದನ ವಂದಿಸಿದರು.