ACCIDENT 
ಉಡುಪಿ

ಕಾರಿಗೆ ತಡೆರಹಿತ ಬಸ್ ಡಿಕ್ಕಿ

ಇಂದಿರಾ ಎನ್ ಕೆ
ಮೂಲ್ಕಿ: ಮೂಲ್ಕಿ ಬಸ್ ನಿಲ್ದಾಣದ ಬಳಿ ಕಾರಿಗೆ ತಡೆರಹಿತ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಮಕ್ಕಳು ಸಹಿತ ಚಾಲಕ ಪವಾಡ ಸದೃಶ ಪಾರಾಗಿದ್ದಾರೆ.
ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಬಸ್ ಮೂಲ್ಕಿ ನಿಲ್ದಾಣ ತಲುಪುತ್ತಿದ್ದಂತೆ ಉಡುಪಿ ಕಡೆಗೆ ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನ ಎದುರು ಭಾಗಕ್ಕೆ ಹಾನಿಯಾಗಿದ್ದು, ಕಾರಿನಲ್ಲಿದ್ದ ಪುಟ್ಟ ಮಕ್ಕಳು ಪಾರಾಗಿದ್ದಾರೆ.
ಕಾರು ಚಾಲಕ ಧೀರಜ್ ಶೆಟ್ಟಿ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರಿಗೆ ದೂರು ನೀಡಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.