ಬಂಟೆ ಸಂಘದ ಆಟಿಡೊಂಜಿ ಬಂಟೆರೆ ಸೇರಿಗೆ ಕಾರ್ಯಕ್ರಮದಲ್ಲಿ ಬಾರ್ಕೂರು ಮಹಾಸಂಸ್ಥಾನದ ಡಾ.ವಿದ್ಯಾವಾಚಸ್ಪತಿ ವಿಶ್ವಸಂತೋಷ ಭಾರತಿ ಶ್ರೀಪಾದರು ಮಾತನಾಡಿದರು. ಪ್ರಮುಖರಾದ ದಂಬೆಕ್ಕಾನ ಸದಾಶಿವ ರೈ, ಪ್ರಮೋದ್‌ಕುಮಾರ್ ಶೆಟ್ಟಿ, ದಯಾನಂದ ರೈ ಮೊದಲಾದವರು ಉಪಸ್ಥಿತರಿದ್ದರು. 
ಉಡುಪಿ

ದುಡಿದ ಒಂದಂಶ ಸಮಾಜಮುಖಿ ಸೇವೆಗೆ ವಿನಿಯೋಗ

ಉಪ್ಪಿನಂಗಡಿ: ಧಾರ್ಮಿಕವಾಗಿ ಬಂಟ ಸಮುದಾಯ ಹಿಂದುಳಿದಿದೆ. ಸರ್ಕಾರದಿಂದಲೂ ಬಂಟ ಸಮುದಾಯಕ್ಕೆ ಯಾವುದೇ ಅನುದಾನ ಸಿಗುತ್ತಿಲ್ಲ. ಸಮುದಾಯದಲ್ಲಿ ಶೇ.45ರಷ್ಟು ಜನ ಬಡವರಿದ್ದಾರೆ. ದೇವಸ್ಥಾನಕ್ಕೆ ಕೋಟ್ಯಂತರ ರೂ. ವ್ಯಯಿಸುವುದಕ್ಕಿಂತ ಆಸ್ಪತ್ರೆ ನಿರ್ಮಾಣ ಮಾಡಿ ಚಿಕಿತ್ಸೆ ಕೊಟ್ಟಲ್ಲಿ ಸಾವಿರಾರು ಜನರಿಗೆ ಉತ್ತಮ ಆರೋಗ್ಯ ನೀಡಬಹುದು ಎಂದು ಬಾರ್ಕೂರು ಮಹಾಸಂಸ್ಥಾನದ ಶ್ರೀ ಡಾ.ವಿದ್ಯಾವಾಚಸ್ಪತಿ ವಿಶ್ವಸಂತೋಷ ಭಾರತಿ ಶ್ರೀಪಾದರು ಹೇಳಿದರು.

ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಲ್ಪವೃಕ್ಷ ಸಹಕಾರಿ ಸೌಧದಲ್ಲಿ ಮಂಗಳೂರು ಬಂಟರ ಯಾನೆ ನಾಡವರ ಮಾತೃ ಸಂಘ, ಪುತ್ತೂರು ತಾಲೂಕು ಬಂಟರ ಸಂಘದ ಮಾರ್ಗದರ್ಶನದಲ್ಲಿ ನೆಲ್ಯಾಡಿ ವಲಯ ಬಂಟರ ಸಂಘದ ಆಶ್ರಯದಲ್ಲಿ ಆಟಿಡೊಂಜಿ ಬಂಟೆರೆ ಸೇರಿಗೆ, ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.
ಸಾಮಾಜಿಕ, ಧಾರ್ಮಿಕ ಮುಂದಾಳು ತುಕ್ರಪ್ಪ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ನೆಲ್ಯಾಡಿ ವಲಯ ಬಂಟರ ಸಂಘ ಅಧ್ಯಕ್ಷ ಪ್ರತಾಪ್‌ಚಂದ್ರ ರೈ ಅಧ್ಯಕ್ಷತೆ ವಹಿಸಿದ್ದರು. ನೂತನ ಸಮಿತಿ ಅಧ್ಯಕ್ಷ ವಿಶ್ವನಾಥ ಶೆಟ್ಟಿ, ಕಾರ್ಯದರ್ಶಿ ಅನಿಲ್ ರೈ, ಕೋಶಾಧಿಕಾರಿ ಪ್ರವೀಣ್ ಭಂಡಾರಿ ಅವರಿಗೆ ಅಧಿಕಾರ ಹಸ್ತಾಂತರ ಮಾಡಲಾಯಿತು.
ಬಂಟರ ಯಾನೆ ನಾಡವರ ಮಾತೃಸಂಘ ಮಂಗಳೂರು ಸಂಚಾಲಕ ದಂಬೆಕ್ಕಾನ ಸದಾಶಿವ ರೈ, ರಾಷ್ಟ್ರೀಯ ವೇಯ್ಟ ಲಿಫ್ಟಿಂಗ್ ತರಬೇತುದಾರ ಪ್ರಮೋದ್‌ಕುಮಾರ್ ಶೆಟ್ಟಿ, ಪುತ್ತೂರು ತಾಲೂಕು ಬಂಟರ ಸಂಘದ ಮಾಜಿ ಅಧ್ಯಕ್ಷ ದಯಾನಂದ ರೈ, ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಎನ್., ಪುತ್ತೂರು ತಾಲೂಕು ಮಹಿಳಾ ಬಂಟರ ವಿಭಾಗದ ಅಧ್ಯಕ್ಷೆ ಗೀತಾ ಮೋಹನ್ ರೈ, ಪುತ್ತೂರು ತಾಲೂಕು ಬಂಟರ ಸಂಘದ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ, ನೆಲ್ಯಾಡಿ ವಲಯ ಬಂಟರ ಸಂಘದ ಗೌರವಾಧ್ಯಕ್ಷ ವಿಶ್ವನಾಥ ಶೆಟ್ಟಿ, ಕಾರ್ಯದರ್ಶಿ ಮಹಾಬಲ ಶೆಟ್ಟಿ ಉಪಸ್ಥಿತರಿದ್ದರು.
ಪ್ರತಾಪ್‌ಚಂದ್ರ ರೈ ಸ್ವಾಗತಿಸಿದರು. ಮಹಾಬಲ ಶೆಟ್ಟಿ ವಂದಿಸಿದರು. ಉಪನ್ಯಾಸಕ ವಿಶ್ವನಾಥ ಶೆಟ್ಟಿ, ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ದಯಾಕರ ರೈ ನಿರೂಪಿಸಿದರು.