ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಸೈನಿಕರ ಸ್ಮರಣಾರ್ಥ ನಿರ್ಮಿಸಲಾದ ಕಾರ್ಗಿಲ್ ವನಕ್ಕೆ ಭೇಟಿ ನೀಡಿ ಗೌರವ ನಮನ ಸಲ್ಲಿಸಲಾಯಿತು. ಕಾರ್ಗಿಲ್ ವನದ ರೂವಾರಿ ಸಚಿನ್ ಭಿಡೆ, ಎನ್‌ಎಸ್‌ಎಸ್ ಯೋಜನಾಧಿಕಾರಿ ವಿಶ್ವನಾಥ್ ಎಸ್. ಮೊದಲಾದವರಿದ್ದರು. 
ಉಡುಪಿ

ದೇಶಭಕ್ತಿಯ ಸಂದೇಶ ಸಾರುವ ಪವಿತ್ರ ತಾಣ

ಬೆಳ್ತಂಗಡಿ: ನಾವೆಲ್ಲರೂ ಇಂದು ನೆಮ್ಮದಿಯಿಂದ ಬದುಕುತ್ತಿದ್ದೇವೆ ಎಂದರೆ ಅದಕ್ಕೆ ನಮ್ಮ ಸೈನಿಕರ ತ್ಯಾಗವೇ ಕಾರಣ. ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ 527 ವೀರ ಸೈನಿಕರ ನೆನಪಿಗಾಗಿ ಇಲ್ಲಿ 527 ಗಿಡಗಳನ್ನು ನೆಡಲಾಗಿದೆ.

ಪ್ರತಿಯೊಂದು ಗಿಡವೂ ಒಬ್ಬೊಬ್ಬ ವೀರಸೈನಿಕರ ಅಮರ ತ್ಯಾಗದ ಸಂಕೇತವಾಗಿದೆ. ಈ ವನವು ದೇಶಭಕ್ತಿಯ ಸಂದೇಶವನ್ನು ಮುಂದಿನ ಪೀಳಿಗೆಗೆ ಸಾರುವ ಪವಿತ್ರ ತಾಣವಾಗಿದೆ ಎಂದು ಕಾರ್ಗಿಲ್ ವನದ ರೂವಾರಿ ಸಚಿನ್ ಭಿಡೆ ಹೇಳಿದರು.

ಕಾರ್ಗಿಲ್ ವಿಜಯ ದಿನದ ಅಂಗವಾಗಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ(ಎನ್‌ಎಸ್‌ಎಸ್) ಘಟಕದ ವತಿಯಿಂದ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಸೈನಿಕರ ಸ್ಮರಣಾರ್ಥ ನಿರ್ಮಿಸಲಾದ ಕಾರ್ಗಿಲ್ ವನಕ್ಕೆ ಭೇಟಿ ನೀಡಿ ಗೌರವ ನಮನ ಸಲ್ಲಿಸಲಾಯಿತು.
ಎನ್‌ಎಸ್‌ಎಸ್ ಯೋಜನಾಧಿಕಾರಿ ವಿಶ್ವನಾಥ್ ಎಸ್. ಮಾತನಾಡಿ, ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟ ವೀರ ಯೋಧರನ್ನು ಸ್ಮರಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ. ಕಾರ್ಗಿಲ್ ವನವು ಹುತಾತ್ಮರ ತ್ಯಾಗವನ್ನು ನೆನಪಿಸುವುದರ ಜತೆಗೆ ಯುವಜನರಲ್ಲಿ ದೇಶಪ್ರೇಮವನ್ನು ಬೆಳೆಸುವ ಕಾರ್ಯ ಮಾಡುತ್ತಿದೆ ಎಂದು ತಿಳಿಸಿದರು.
ಎನ್‌ಎಸ್‌ಎಸ್ ಸ್ವಯಂಸೇವಕರು ಗಿಡಗಳನ್ನು ನೆಡುವ ಮೂಲಕ ವೀರಸೈನಿಕರಿಗೆ ಗೌರವ ನಮನ ಸಲ್ಲಿಸಿದರು. ಸಹಯೋಜನಾಧಿಕಾರಿ ಶೋಭಾ ಪಿ. ಉಪಸ್ಥಿತರಿದ್ದರು. ಎನ್‌ಎಸ್‌ಎಸ್ ಸ್ವಯಂಸೇವಕಿ ಸುಪೇಕ್ಷಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.