ಹೆಬ್ರಿ: ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಉಚಿತ ಶಿಕ್ಷಣ ನೀಡುವುದು ಮತ್ತು ಕೆಸಿಇಟಿ, ನೀಟ್, ಜೆಇಇ, ಎನ್. ಡಿ.ಎ., ಸಿಎಸ್ಇಇಟಿ, ಸಿಎ ಫೌಂಡೇಶನ್ ಮುಂತಾದ ರಾಜ್ಯ ಮತ್ತು ರಾಷ್ಟ್ರಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭದ್ರ ಅಡಿಪಾಯ ಹಾಕುವುದು ಈ ಪರೀಕ್ಷೆಯ ಮುಖ್ಯ ಉದ್ದೇಶ ಎಂದು ಹೆಬ್ರಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪಿಯು ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಎಚ್.ರಾಜೇಶ್ ನಾಯಕ್ ಹೇಳಿದರು.
ಕಾಲೇಜು ವತಿಯಿಂದ 2027-28ನೇ ಶೈಕ್ಷಣಿಕ ಸಾಲಿನ ದಾಖಲಾತಿಗೆ 10ನೇ ತರಗತಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಮೊದಲ ಹಂತದ ಉಚಿತ ಶಿಕ್ಷಣ ಪ್ರವೇಶ ಪರೀಕ್ಷೆ ಸಂದರ್ಭ ಮಾತನಾಡಿದರು.
ಪ್ರಾಂಶುಪಾಲ ಪ್ರಕಾಶ್ ಜೋಗಿ ಎರಡನೇ ಹಂತದ ಪರೀಕ್ಷೆಯನ್ನು ನ.1ರಂದು ನಡೆಸಲಾಗುವುದು ಎಂದರು. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳ ಶಾಲೆಗಳಿಂದ 600ಕ್ಕೂ ಅಧಿಕ ವಿದ್ಯಾರ್ಥಿಗಳು ಆಗಮಿಸಿದ್ದರು.
ಅಮೃತ ಭಾರತಿ ಟ್ರಸ್ಟ್ ಸ್ಥಾಪಕ ಅಧ್ಯಕ್ಷ ಎಚ್.ಸತೀಶ್ ಪೈ ಮಾತನಾಡಿದರು. ಅಮೃತ ಭಾರತಿ ಸಮೂಹ ಸಂಸ್ಥೆಗಳ ಮೇಲ್ವಿಚಾರಕ ವಿಜಯ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಉಪನ್ಯಾಸಕ ವೀಣೇಶ್ ಅಮೀನ್ ನಿರೂಪಿಸಿದರು.