ಮೂಲ್ಕಿ ತಾಲೂಕಿನ ಪದವಿ ಪೂರ್ವ ವಿಭಾಗದ ದೈಹಿಕ ಶಿಕ್ಷಣ ನಿರ್ದೇಶಕರನ್ನು ಗೌರವಿಸುವ ಶಿಕ್ಷಕ ಸಪರ್ಯ-2026 ನಡೆಯಿತು. ಮೂಲ್ಕಿ ರೋಟರಿ ಅಧ್ಯಕ್ಷೆ ಭಾನುಮತಿ ಶೆಟ್ಟಿ ಕಕ್ವಗುತ್ತು, ಪುನರೂರು ಪ್ರತಿಷ್ಠಾನ ಗೌರವಾಧ್ಯಕ್ಷ ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು ಮೊದಲಾದವರಿದ್ದರು. 
ಉಡುಪಿ

ಸರ್ವಾಂಗೀಣ ವ್ಯಕ್ತಿತ್ವ ರೂಪಿಸುವ ಶಿಕ್ಷಕ

ಮೂಲ್ಕಿ: ತಾಯಿ ಮೊದಲ ಗುರುವಾದರೆ, ವಿದ್ಯಾರ್ಥಿಯ ಸರ್ವಾಂಗೀಣ ವ್ಯಕ್ತಿತ್ವವನ್ನು ರೂಪಿಸುವ ವ್ಯಕ್ತಿ ಶಿಕ್ಷಕರಾಗಿದ್ದಾರೆ ಎಂದು ಮೂಲ್ಕಿ ರೋಟರಿ ಅಧ್ಯಕ್ಷೆ ಭಾನುಮತಿ ಶೆಟ್ಟಿ ಕಕ್ವಗುತ್ತು ಹೇಳಿದರು.
ಶಿಕ್ಷಕರ ದಿನಾಚರಣೆ ಪ್ರಯುಕ್ತ ಪುನರೂರು ಪ್ರತಿಷ್ಠಾನ ಆಶ್ರಯದಲ್ಲಿ ಮೂಲ್ಕಿಯ ಜನ ವಿಕಾಸ ಸಮಿತಿ ಸಹಕಾರದಲ್ಲಿ ಪುನರೂರಿನಲ್ಲಿ ಆಯೋಜಿಸಲಾದ ಮೂಲ್ಕಿ ತಾಲೂಕಿನ ಪದವಿಪೂರ್ವ ವಿಭಾಗದ ದೈಹಿಕ ಶಿಕ್ಷಣ ನಿರ್ದೇಶಕರನ್ನು ಗೌರವಿಸುವ ಶಿಕ್ಷಕ ಸಪರ್ಯ-2026 ಕಾರ್ಯಕ್ರಮದಲ್ಲಿ ಶುಭಹಾರೈಸಿದರು.

ಪುನರೂರು ಪ್ರತಿಷ್ಠಾನ ಗೌರವಾಧ್ಯಕ್ಷ ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸಿದ್ದರು. ಮೂಲ್ಕಿ ಶ್ರೀ ನಾರಾಯಣ ಗುರು ಸಂಯುಕ್ತ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕಿ ಶ್ರುತಿ ಪೂಜಾರಿ, ವಿಜಯ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರಾಕೇಶ್ ವಿ.ಕಾಂಚನ್, ಮೆಡಲಿನ್ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಕಿರಣ್ ಕುದ್ರಿಪದವು, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಪುಂಡಲೀಕ ಕೊಠಾರಿ ಅವರನ್ನು ಗೌರವಿಸಲಾಯಿತು.
ಲಯನ್ಸ್ ಕ್ಲಬ್ ಮೂಲ್ಕಿ ಅಧ್ಯಕ್ಷ ಪ್ರವೀಣ್ ಶೆಟ್ಟಿ, ಜನವಿಕಾಸ ಸಮಿತಿ ಅಧ್ಯಕ್ಷ ಸುರೇಶ್ ರಾವ್, ಸದಸ್ಯೆ ಶೋಭಾ ರಾವ್ ಉಪಸ್ಥಿತರಿದ್ದರು. ಪುನರೂರು ಪ್ರತಿಷ್ಠಾನ ಅಧ್ಯಕ್ಷ ದೇವಪ್ರಸಾದ್ ಪುನರೂರು ಸ್ವಾಗತಿಸಿದರು. ಕೊಡೆತ್ತೂರು ದಾಮೋದರ ಶೆಟ್ಟಿ ವಂದಿಸಿದರು. ಪ್ರಾಣೇಶ್ ಭಟ್ ದೇಂದಡ್ಕ ಕಾರ್ಯಕ್ರಮ ನಿರೂಪಿಸಿದರು.