ಬಂಟ್ವಾಳ: ಟೆಂಪೋ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಪಾದಚಾರಿ, ಬೆಳ್ತಂಗಡಿ ತಾಲೂಕಿನ ಕುಕ್ಕಳ ಗ್ರಾಮದ ಬಾಬು ಎಂಬುವರ ಪುತ್ರ ಸುನೀಲ್ (23) ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ಮೃತಪಟ್ಟಿದ್ದಾರೆ.
ಸುನೀಲ್ ಪುಂಜಾಲಕಟ್ಟೆಯಲ್ಲಿರುವ ಕೋಳಿ ಅಂಗಡಿಯಲ್ಲಿ ಕೆಲಸ ವಾಡುತ್ತಿದ್ದು, ಆ.20ರಂದು ರಾತ್ರಿ ಕೆಲಸ ಮುಗಿಸಿ ನಡೆದುಕೊಂಡು ಹೋಗುತ್ತಿದ್ದಾಗ ಮಡಂತ್ಯಾರು ಕಡೆಯಿಂದ ಪುಂಜಾಲಕಟ್ಟೆಗೆ ಬರುತ್ತಿದ್ದ ಟೆಂಪೋ ಡಿಕ್ಕಿ ಹೊಡೆದಿತ್ತು.
ಡಿಕ್ಕಿಯ ರಭಸಕ್ಕೆ ಸುನೀಲ್ ರಸ್ತೆಗೆ ಎಸೆಯಲ್ಪಟ್ಟು ತಲೆಗೆ ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ತಂದೆ, ತಾಯಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.