ಸಂದೀಪ್ ಪೂಜಾರಿ 
ಉಡುಪಿ

ಅಪಘಾತ ಗಾಯಾಳು ಮೃತ್ಯು

ಇಂದಿರಾ ಎನ್ ಕೆ

ಮೂಡುಬಿದಿರೆ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಹೊಸ್ಮಾರ್ ನೂರಾಳಬೆಟ್ಟು ನಿವಾಸಿ ಸಂದೀಪ್ ಪೂಜಾರಿ ಚಿಕಿತ್ಸೆ ಫಲಿಸದೆ ಭಾನುವಾರ ಮೃತಪಟ್ಟಿದ್ದಾರೆ.

ಮೂಡುಬಿದಿರೆ ಸಮೀಪದ ಗಂಟಾಲ್ಕಟ್ಟೆಯಲ್ಲಿ ಶುಕ್ರವಾರ ಬೈಕ್‌ನಲ್ಲಿ ಸಂಚರಿಸುತ್ತಿದ್ದ ವೇಳೆ ಸಂದೀಪ್ ಪೂಜಾರಿ ಅವರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿತ್ತು. ಅಪಘಾತದ ರಭಸಕ್ಕೆ ತಲೆಗೆ ಗಂಭೀರ ಗಾಯವಾಗಿದ್ದು, ತಕ್ಷಣ ಅವರನ್ನು ಸ್ಥಳೀಯ ಆಳ್ವಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ರಾತ್ರಿ ಮೃತಪಟ್ಟಿದ್ದಾರೆ.
ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಸಂದೀಪ್ ಪೂಜಾರಿ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಮೆಸ್ ಉದ್ಯೋಗಿಯಾಗಿದ್ದರು.