ಅಬೂಬಕ್ಕರ್  
ಉಡುಪಿ

ಕಳ್ಳತನ ಪ್ರಕರಣ ಆರೋಪಿ ಬಂಧನ

ಇಂದಿರಾ ಎನ್ ಕೆ

ಮೂಡುಬಿದಿರೆ: ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಆರು ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ವಾರಂಟ್ ಜಾರಿಯಾಗಿದ್ದ ಅಬೂಬಕ್ಕರ್ ಯಾನೆ ಅಬ್ದುಲ್ ಖಾದರ್ ಯಾನೆ ಇತ್ತೆ ಬರ್ಪೆ ಅಬೂಬಕ್ಕರ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಮೂಡುಬಿದಿರೆ ಪೊಲೀಸ್ ಠಾಣೆಯ ವಾರಂಟ್ ಜಾರಿ ಕರ್ತವ್ಯದ ಎಚ್.ಸಿ.ರವೀಂದ್ರ, ಪಿ.ಸಿ.ಲಿಂಗೇಶ್, ಕೋರ್ಟ್ ಪಿ.ಸಿ.ರಮೇಶ್ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಸೆ.15ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಆರೋಪಿ ವಿರುದ್ಧ ಕಾರ್ಕಳ ಗ್ರಾಮಾಂತರ, ಶಿರ್ವ, ಮೂಲ್ಕಿ, ಬಸವನಹಳ್ಳಿ, ಉಪ್ಪಿನಂಗಡಿ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ.