ಬೆಂಗಳೂರಿನ ಶಿವನಗರ ನಿವಾಸಿ ಎಂ. ಬಾಬು. 
ಉಡುಪಿ

23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಉಡುಪಿ: ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಲ್ಪೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಗಳೂರಿನ ಶಿವನಗರ ನಿವಾಸಿ ಎಂ. ಬಾಬು (52) ಬಂಧಿತ ಆರೋಪಿ. ಈತ 2003ರಲ್ಲಿ ಮಲ್ಪೆ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಗಲಭೆ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದನು. ಈತನ ವಿರುದ್ಧ ಕೊಲೆ ಯತ್ನ ಸೇರಿದಂತೆ ವಿವಿಧ ಗಂಭೀರ ಪ್ರಕರಣಗಳು ದಾಖಲಾಗಿವೆ. ಕಳೆದ ಐದು ತಿಂಗಳಿನಿಂದ ನಿರಂತರ ಮಾಹಿತಿ ಕಲೆಹಾಕಿದ ಪೊಲೀಸರು, ಆರೋಪಿ ಬೆಂಗಳೂರಿನಲ್ಲಿರುವ ಬಗ್ಗೆ ಖಚಿತ ಮಾಹಿತಿ ಪಡೆದಿದ್ದರು. ಏಪ್ರಿಲ್​ 12ರಂದು ಬೆಂಗಳೂರಿಗೆ ತೆರಳಿದ ಮಲ್ಪೆ ಠಾಣೆ ಪೊಲೀಸರು ಏಪ್ರಿಲ್​ 14ರಂದು ರಾಮಮೂರ್ತಿ ನಗರದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ಏಪ್ರಿಲ್​ 28ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.