ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ನಡೆದ ದಿ.ಡಾ.ಬಾಬು ಜಗಜೀವನ್‌ರಾಮ್ ಜಯಂತಿ ಕಾರ್ಯಕ್ರಮವನ್ನು ತಾ.ಪಂ. ಕಾರ್ಯನಿರ್ವಾಣಾಧಿಕಾರಿ ಭವಾನಿ ಶಂಕರ್ ಉದ್ಘಾಟಿಸಿದರು. ಪ್ರಮುಖರಾದ ಪೃಥ್ವಿ ಸಾನಿಕಮ್, ಧನಂಜಯ್, ಹೇಮಲತಾ ಮತ್ತಿತರರಿದ್ದರು.
ಬೆಳ್ತಂಗಡಿ: ಪರಿಶ್ರಮದಿಂದ ಮಾತ್ರ ಜ್ಞಾನ ಗಳಿಸಲು ಸಾಧ್ಯ. ಶಿಸ್ತುಬದ್ಧವಾಗಿ ನಡೆದುಕೊಂಡಾಗ ಸಾಧನೆ ಸಾಧ್ಯ. ಅವಕಾಶಗಳನ್ನು ಉತ್ತಮ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂದು ಮುಂಡಾಜೆ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಶಿಕ್ಷಕ ಅರವಿಂದ ಚೊಕ್ಕಾಡಿ ಹೇಳಿದರು.
ಬೆಳ್ತಂಗಡಿ ತಾಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ ಹಾಗೂ ಬೆಳ್ತಂಗಡಿ ಪ.ಪಂ. ಆಶ್ರಯದಲ್ಲಿ ತಾಲೂಕು ಕಚೇರಿಯಲ್ಲಿ ನಡೆದ ಹಸಿರುಕ್ರಾಂತಿ ಹರಿಕಾರ ದಿ.ಡಾ.ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆಯಲ್ಲಿ ಮಾತನಾಡಿದರು.
ತಾ.ಪಂ. ಕಾರ್ಯನಿರ್ವಾಣಾಧಿಕಾರಿ ಭವಾನಿ ಶಂಕರ್ ಕಾರ್ಯಕ್ರಮ ಉದ್ಘಾಟಿಸಿದರು. ತಹಸೀಲ್ದಾರ ಪೃಥ್ವಿ ಸಾನಿಕಮ್ ಅಧ್ಯಕ್ಷತೆ ವಹಿಸಿದ್ದರು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಧನಂಜಯ್ ಮೊದಲಾದವರಿದ್ದರು.
ಡಾ.ಬಿಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯದ ಮೇಲ್ವಿಚಾರಕಿ ಹೇಮಲತಾ ಸ್ವಾಗತಿಸಿದರು. ಉಜಿರೆ ಪವರ್ಗದ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಮೇಲ್ವಿಚಾರಕ ಬಸವರಾಜ್ ವಂದಿಸಿದರು. ವೇಣೂರು ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕಿ ಡಾ.ಅರ್ಷಿಯಾ ನಿರೂಪಿಸಿದರು.