ಗಾಣಿಗ ಸಮಾಜದ ಹಿರಿಯರಾದ ಸದಾನಂದ ಸಪಲಿಗ ನ್ಯಾಯ ಬಸದಿ, ವೆಂಕಮ್ಮ ಪಡ್ಡಂದಡ್ಕ ಅವರನ್ನು ಸನ್ಮಾನಿಸಲಾಯಿತು. ಆಳ್ವಾಸ್ ಎಜುಕೇಶನ್ ೌಂಡೇಶನ್ ಟ್ರಸ್ಟಿ ವಿವೇಕ್ ಆಳ್ವ, ಸಂಘ ಅಧ್ಯಕ್ಷ ರಾಜೇಶ್ ಬಂಗೇರ, ಪುತ್ತೂರು ಗಾಣಿಗ ಸಂಘ ಅಧ್ಯಕ್ಷ ಲಕ್ಷ್ಮೀ ಪ್ರಸಾದ್ ಬೆಟ್ಟ ಮೊದಲಾದವರು ಇದ್ದರು.  
ಉಡುಪಿ

ವಿವಿಧ ಕ್ಷೇತ್ರಗಳಲ್ಲಿ ಗಾಣಿಗ ಸಮುದಾಯದ ಸಾಧನೆ

ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ
ಯುವಜನರನ್ನು ಅಂಕ ಗಳಿಕೆಗೆ ಸೀಮಿತಗೊಳಿಸದೆ ಕೌಶಲಾಭಿವೃದ್ಧಿ ಹೆಚ್ಚಿಸುವ ಚಟುವಟಿಕೆಗಳಲ್ಲಿ ತೊಡಗಿಸಬೇಕು. ಗಾಣಿಗ ಸಮುದಾಯದವರು ಹಿಂದೆ ಎಣ್ಣೆ ತೆಗೆಯುವ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದು, ನಂತರ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಗುರುತಿಸಿಕೊಂಡಿದ್ದಾರೆ ಎಂದು ಆಳ್ವಾಸ್ ಎಜುಕೇಶನ್ ಫೌಂಡೇಶನ್ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು.
ಸಪಲಿಗ ಯಾನೆ ಗಾಣಿಗರ ಸೇವಾ ಸಂಘದ 41ನೇ ವರ್ಷದ ವಾರ್ಷಿಕ ಮಹಾಸಭೆ, ಗಾಣಿಗರ ಮಹಿಳಾ ವೇದಿಕೆ, ಯುವ ವೇದಿಕೆ ಸಹಯೋಗದಲ್ಲಿ ವಿದ್ಯಾರ್ಥಿವೇತನ ವಿತರಣೆ, ಪ್ರತಿಭಾ ಪುರಸ್ಕಾರ, ಸತ್ಯನಾರಾಯಣ ಪೂಜೆ, ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಉದ್ಯಮಿ ಸಂದೀಪ್ ಪುತ್ತಿಗೆ ಸಂಘದ ಶೈಕ್ಷಣಿಕ ಚಟುವಟಿಕೆಗಳಿಗೆ 3 ಲಕ್ಷ ರೂ. ದೇಣಿಗೆ ಹಸ್ತಾಂತರಿಸಿದರು. ಸದಾನಂದ ಸಪಳಿಗ ಸಂಘದ ಕಟ್ಟಡ ನಿರ್ಮಾಣಕ್ಕಾಗಿ 1 ಲಕ್ಷ ರೂ. ದೇಣಿಗೆ ನೀಡಿದರು. ಸಂಘ ಅಧ್ಯಕ್ಷ ರಾಜೇಶ್ ಬಂಗೇರ ಅಧ್ಯಕ್ಷತೆ ವಹಿಸಿದ್ದರು. ಪುತ್ತೂರು ಗಾಣಿಗ ಸಂಘ ಅಧ್ಯಕ್ಷ ಲಕ್ಷ್ಮೀ ಪ್ರಸಾದ್ ಬೆಟ್ಟ, ಗಾಣಿಗ ಯುವವೇದಿಕೆ ಅಧ್ಯಕ್ಷ ಸುಕೇಶ್ ಬಾರಾಡಿ, ಮಹಿಳಾ ವೇದಿಕೆ ಅಧ್ಯಕ್ಷೆ ಸುಜಯ ಬಂಗೇರ, ವಿದ್ಯಾರ್ಥಿ ವೇದಿಕೆ ಅಧ್ಯಕ್ಷ ರಾಜ್ ಬಂಗೇರ ಉಪಸ್ಥಿತರಿದ್ದರು. ಕಾರ್ಯದರ್ಶಿ ಪ್ರತಾಪ್ ಬೆಟ್ಕೇರಿ ವಾರ್ಷಿಕ ವರದಿ ಮಂಡಿಸಿದರು. ರಾಜೇಶ್ ಬಂಗೇರ ಸ್ವಾಗತಿಸಿದರು. ಮಹಿಳಾ ವೇದಿಕೆ ಕಾರ್ಯದರ್ಶಿ ಸಾರಿಕ ರಾಜೇಶ್ ಬಂಗೇರ ಲೆಕ್ಕಪತ್ರ ಮಂಡಿಸಿದರು. ಜತೆ ಕಾರ್ಯದರ್ಶಿ ನಳಿನಿ ಲಕ್ಷ್ಮಣ್ ವರದಿ ಮಂಡಿಸಿದರು. ಸಾಂಸ್ಕೃತಿಕ ಕಾರ್ಯದರ್ಶಿ ರೂಪಾ ಪ್ರದೀಪ್ ನಿರೂಪಿಸಿದರು. ಜತೆ ಕಾರ್ಯದರ್ಶಿ ಭವಾನಿ ಶಂಕರ್, ಸಂಧ್ಯಾ ಸಂದೀಪ್ ಸನ್ಮಾನಿತರನ್ನು ಪರಿಚಯಿಸಿದರು. ದಿಯಾ ಬಂಗೇರ ವಿದ್ಯಾರ್ಥಿಗಳ ವಿವರ ನೀಡಿದರು. ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ನವೀನ್ ಪುತ್ರನ್ ಪುಸ್ತಕ ವಿತರಣೆ ವಿವರ ನೀಡಿದರು. ಸಂಘದ ಪ್ರಧಾನ ಕಾರ್ಯದರ್ಶಿ ಪ್ರತಾಪ್ ವಂದಿಸಿದರು.

ವಿದ್ಯಾರ್ಥಿವೇತನ ವಿತರಣೆ

ಸಮಾಜದ ಹಿರಿಯರಾದ ಸದಾನಂದ ಸಪಳಿಗ ನ್ಯಾಯ ಬಸದಿ, ವೆಂಕಮ್ಮ ಪಡ್ಡಂದಡ್ಕ, ಕಿನ್ನಿಗೋಳಿ ಪಪಂ ಅಧ್ಯಕ್ಷ ಗುರುರಾಜ್ ಮಲ್ಲಿಗೆಯಂಗಡಿ ಅವರನ್ನು ಗೌರವಿಸಲಾಯಿತು. ದಿ.ಸಾಧು ಪುತ್ರನ್, ದಿ.ಜಾರಪ್ಪ ಮೇಸತ್ರಿ, ದಿ.ಸುಂದರಿ ಜಾರಪ್ಪ, ದಿ.ಬಾಬು ಸಪಲಿಗ ಸ್ಮರಣಾರ್ಥ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು.