ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಯ ಲಿಖಿತ ಪರೀಕ್ಷೆಯ ಉಚಿತ ತರಬೇತಿ ಕಾರ್ಯಕ್ರಮವನ್ನು ಶಾಸಕ ಕಿರಣ್ ಕುಮಾರ್ ಕೊಡ್ಗಿ ಉದ್ಘಾಟಿಸಿದರು. ಪ್ರಮುಖರಾದ ಆನಂದ್ ಸಿ.ಕುಂದರ್, ರಾಘವೇಂದ್ರ ಶೆಟ್ಟಿ, ಹಕ್ಕಪ್ಪ ಲಮಾಣಿ ಮೊದಲಾದವರು ಉಪಸ್ಥಿತರಿದ್ದರು.  
ಉಡುಪಿ

ಸವಾಲುಗಳನ್ನು ಮೆಟ್ಟಿ ನಿಂತಾಗ ಗುರಿ ಸಾಧನೆ

ವಿಜಯವಾಣಿ ಸುದ್ದಿಜಾಲ ಕೋಟ
ಪೊಲೀಸ್ ಇಲಾಖೆಯಲ್ಲಿ ಸಾಕಷ್ಟು ಸವಾಲುಗಳು ಬರುತ್ತವೆ, ಅವುಗಳು ನಮ್ಮ ನಿರೀಕ್ಷೆಯನ್ನು ಮೀರಿ ಇರುತ್ತವೆ. ಸವಾಲುಗಳು ಬಂದಾಗ ತಾಳ್ಮೆ, ಸಹನೆಯನ್ನು ಸಮಯ ಸಂದರ್ಭಕ್ಕೆ ತಕ್ಕಂತೆ ರೂಢಿಸಿಕೊಂಡಾಗ ಪೇದೆಯಾಗಿ ಸಾರ್ಥಕ ಸೇವೆ ಕಂಡಂತೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಹೇಳಿದರು.
ಕೋಟ ಡಾ.ಶಿವರಾಮ ಕಾರಂತ ಥೀಮ್ ಪಾರ್ಕ್‌ನಲ್ಲಿ ವಿ-ಶೈನ್ ಕೋಚಿಂಗ್ ಸೆಂಟರ್ ಕೋಟ ಹಾಗೂ ಓಂ ಫ್ರೆಂಡ್ಸ್ ಕುಂದಾಪುರ ಆಶ್ರಯದಲ್ಲಿ ಉದ್ಯೋಗ ಸಂಕಲ್ಪ ಎಂಬ ವಿಶೇಷ ಅಭಿಯಾನದಡಿ ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಯ ಲಿಖಿತ ಪರೀಕ್ಷೆಯ ಉಚಿತ ತರಬೇತಿ ಕಾರ್ಯಕ್ರಮದಲ್ಲಿ ಭಾನುವಾರ ಮಾತನಾಡಿದರು.
ಪೊಲೀಸ್ ಹುದ್ದೆಗೆ ಆಯ್ಕೆಯಾದ ಸಾಧಕ ಅಭ್ಯರ್ಥಿಗಳಾದ ಪ್ರೀತೇಶ್, ಪ್ರಜ್ವಲ್, ಕೃಷ್ಣ ಅವರನ್ನು ಸನ್ಮಾನಿಸಲಾಯಿತು. ಅಭಿಯಾನದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ನಾಲ್ಕು ನೂರಕ್ಕೂ ಅಧಿಕ ಮಂದಿ ಭಾಗಿಯಾಗಿಯಾದರು. ಕೋಟಿ ಚೆನ್ನಯ್ಯ ತರಬೇತಿ ಕೇಂದ್ರದ ಅಗ್ನಿವೀರರು, ಬಿಸಿಎಂ ಹಾಸ್ಟೆಲ್ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಶಾಸಕ ಕಿರಣ್ ಕುಮಾರ್ ಕೊಡ್ಗಿ ಕಾರ್ಯಕ್ರಮ ಉದ್ಘಾಟಿಸಿದರು. ಬೆಂಗಳೂರಿನ ಉಜ್ವಲ ಅಕಾಡೆಮಿ ಸಂಸ್ಥಾಪಕ ಮಂಜುನಾಥ್ ಕೆ.ಯು. ಉಚಿತ ತರಬೇತಿ ಪಡೆಯಲಿರುವ ಅಭ್ಯರ್ಥಿಗಳಿಗೆ ಪರೀಕ್ಷಾ ಸಿದ್ಧತೆಯ ಕುರಿತು ಮಾರ್ಗದರ್ಶನ ನೀಡಿದರು.
ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ.ಕುಂದರ್, ಬೆಂಗಳೂರು ಚಾರ್ಟರ್ಡ್ ಅಕೌಂಟೆಂಟ್ ಕಟ್ಕೇರೆ ರಾಘವೇಂದ್ರ ಶೆಟ್ಟಿ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾಧಿಕಾರಿ ಹಕ್ಕಪ್ಪ ಲಮಾಣಿ, ಕುಂದಾಪುರ ಪೊಲೀಸ್ ಉಪನಿರೀಕ್ಷಕ ನಂಜಾ ನಾಯ್ಕ ಎನ್.,ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ದಯಾನಂದ ಬೆನ್ನೂರು, ಪ್ರಮುಖರಾದ ಜಯಪ್ರಕಾಶ್ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯಕ್ರಮ ಸಂಯೋಜಕ ಹರೀಶ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಪಿಡಿಒ ಗಿರೀಶ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ವಿವೇಕ ಅಮೀನ್ ಸಹಕರಿಸಿದರು. ಶಿಕ್ಷಕ ನರೇಂದ್ರ ಕುಮಾರ್ ಕೋಟ ಕಾರ್ಯಕ್ರಮ ನಿರೂಪಿಸಿದರು. ಪ್ರಸಾದ ಬಿಲ್ಲವ ವಂದಿಸಿದರು.